ಏಕಾಏಕಿ ಪಬ್ ಮೇಲೆ ದಾಳಿ ನಡೆಸಿದ ಮಂಗಳೂರು ಪೊಲೀಸರು!

29/10/2021
ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ ಪಬ್ ಗೆ ದಾಳಿ ನಡೆಸಿದ ಪೊಲೀಸರು, ನಿಯಮ ಪಾಲನೆ ಮಾಡುವಂತೆ ಮೇಲ್ವಿಚಾರಕರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka