ಪಬ್ ನಲ್ಲಿ ಅಪ್ರಾಪ್ತ ಬಾಲಕಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್: ಪಬ್ ಮ್ಯಾನೇಜ್ ಮೆಂಟ್ ಗೆ ಸಂಕಷ್ಟ!
ಹೈದರಾಬಾದ್: ಪಬ್ ನಲ್ಲಿ 8 ವರ್ಷ ವಯಸ್ಸಿನ ಬಾಲಕಿಯೋರ್ವಳು ನೃತ್ಯ ಮಾಡುತ್ತಿರುವ ದೃಶ್ಯ ವೈರಲ್ ಆಗಿದ್ದು, ಈ ವಿಚಾರ ವ್ಯಾಪಕ ಚರ್ಚೆಗೊಳಗಾದ ಬಳಿಕ ಇದೀಗ ಪೊಲೀಸರು ಪಬ್ ನ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.
ಹೈದರಾಬಾದ್ ನ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಾಲಕಿಯು ಪಬ್ ನಲ್ಲಿ ತನ್ನ ಕುಟುಂಬಸ್ಥರ ಜೊತೆಗೆ ಡಾನ್ಸ್ ಮಾಡುತ್ತಿರುವ ದೃಶ್ಯವನ್ನು ಯಾರೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿಸಿದ್ದಾರೆ. ಪಬ್ ನೊಳಗೆ ಅಪ್ರಾಪ್ತ ವಯಸ್ಸಿನವರನ್ನು ಕರೆದೊಯ್ಯುವ ಮೂಲಕ ಪಬ್ ನ ಮ್ಯಾನೇಜ್ ಮೆಂಟ್ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಹುಡುಗಿಯು ತನ್ನ ಕುಟುಂಬಸ್ಥರ ಜೊತೆಗೆ ಪಬ್ ಗೆ ಬಂದಿದ್ದಳು ಮತ್ತು ಆಕೆ ತನ್ನ ಕುಟುಂಬಸ್ಥರ ಗುಂಪಿನಲ್ಲಿ ಸೇರಿಕೊಂಡು ಡಾನ್ಸ್ ಮಾಡಿದ್ದಾಳೆ. ಈ ಸಂಬಂಧ ಐಪಿಸಿ ಸೆಕ್ಷನ್ 188(ಸರ್ಕಾರಿ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪಬ್ ಮಾಲಿಕರು ಮತ್ತು ಮ್ಯಾನೇಜ್ ಮೆಂಟ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೈದರಾಬಾದ್ ಗಚಿಬೌಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
‘ವಿಕ್ರಾಂತ್ ರೋಣ’: ಡೆಡ್ ಮ್ಯಾನ್ ಆಂಥಮ್ ಸೃಷ್ಟಿಸಿತು ಹೊಸ ಕುತೂಹಲ!
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ತಲೆಮರೆಸಿಕೊಂಡಿದ್ದ ಪಿಎಸ್ ಐ ಅರ್ಜುನ್ ನನ್ನು ಬಂಧಿಸಿದ ಸಿಐಡಿ ಪೊಲೀಸರು
ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!
ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ
ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್ ಸ್ಟೇಬಲ್ ನ ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ
ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?