ಸ್ಟಾರ್ ನಟರ ಸ್ಮಾರಕಗಳಿಗೆ ಸಾರ್ವಜನಿಕ ಜಾಗ, ಹಣ ಬಳಕೆ ಮಾಡಬಾರದು: ಚೇತನ್ - Mahanayaka

ಸ್ಟಾರ್ ನಟರ ಸ್ಮಾರಕಗಳಿಗೆ ಸಾರ್ವಜನಿಕ ಜಾಗ, ಹಣ ಬಳಕೆ ಮಾಡಬಾರದು: ಚೇತನ್

chethan ahimsa
31/01/2023

ಚಲನಚಿತ್ರ ಸ್ಟಾರ್ ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ, ಮತ್ತು ಸಂಪನ್ಮೂಲಗಳನ್ನು ಬಳಸಬಾರದು ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು,  ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್ ಗಳು, ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ.  ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ನಟ ಚೇತನ್ ಹೇಳಿಕೆಗೆ ಸಾಕಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ವಾದ ಸರಿಯಾಗಿದೆ ಎಂದು ಬೆಂಬಲಿಸಿದ್ದಾರೆ. ಜೊತೆಗೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ