ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಆಗಸ್ಟ್ 12 ರಿಂದ 25 ರ ವರೆಗೆ ನಗರದ ಸರಕಾರಿ ಪದವಿ ಪೂರ್ವಕಾಲೇಜು ಹಾಗೂ ಎಂ.ಜಿ.ಎಂಪದವಿ ಪೂರ್ವಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವಕಾಲೇಜು ಮತ್ತುಕುಂದಾಪುರದ ಭಂಡಾರಕರ್ಸ್ ಪದವಿ ಪೂರ್ವಕಾಲೇಜಿನಲ್ಲಿ ನಡೆಯಲಿದೆ.
ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನುಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತುದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳಲಾಗಿದೆ.
ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka