ಪಿಯುಸಿ ವಿದ್ಯಾರ್ಥಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು
ಮಂಡ್ಯ: ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ 17 ವರ್ಷ ವಯಸ್ಸಿನ ರಶ್ಮಿ ಹಾಗೂ ಆಲದ ಹಳ್ಳಿ ಗ್ರಾಮದ 18 ವರ್ಷ ವಯಸ್ಸಿನ ಶಶಾಂಕ್ ಗೌಡ ಆತ್ಮಹತ್ಯೆಗೆ ಶರಣಾಗಿರುವವರು ಎಂದು ವರದಿಯಾಗಿದೆ.
ಇವರಿಬ್ಬರು ಕೂಡ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದು, ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ರಶ್ಮಿ ಶನಿವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರ ತಿಳಿದ ಶಶಾಂಕ್ ಗೌಡ ನೊಂದು ತಾನು ಕೂಡ ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಂಜಾಬ್ ಸಿಎಂ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್
ನನ್ನ ಬಟ್ಟೆ ನನ್ನ ಆಯ್ಕೆ, ನೀವ್ಯಾಕೆ ಕೇಳ್ತೀರಿ? | ನಿವೇದಿತಾ ಗೌಡ
ಹಿಜಾಬ್ ವಿವಾದ: ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ಡಾ.ಅಂಬೇಡ್ಕರ್ ನೀಡಿದ್ದಾರೆ | ಶಾಸಕಿ ಕನೀಝ್ ಫಾತಿಮಾ
ಒಂದೇ ಕುಟುಂಬದ ಐವರ ಬರ್ಬರ ಹತ್ಯೆ: ಮಕ್ಕಳು ಎಂದೂ ನೋಡದ ಕೊಚ್ಚಿ ಹಾಕಿದರು!
ಶಾಲೆ ಸರಸ್ವತಿ ಮಂದಿರ, ತಾಲಿಬಾನ್ ಮಾಡಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್