ಪುದು ಗ್ರಾಮ ಪಂಚಾಯತ್ ಉಪ ಚುನಾವಣೆ: ಫಲಿತಾಂಶ ಪ್ರಕಟ - Mahanayaka

ಪುದು ಗ್ರಾಮ ಪಂಚಾಯತ್ ಉಪ ಚುನಾವಣೆ: ಫಲಿತಾಂಶ ಪ್ರಕಟ

pudu grama punchayath
28/02/2023

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾ.ಪಂ. ಚುನಾವಣೆಯ ಮತ ಎಣಿಕೆ ಪೂರ್ಣಗೊಂಡು ರಿಸಲ್ಟ್ ಪ್ರಕಟಗೊಂಡಿವೆ.

ಇದೀಗ ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತೀ ಹೆಚ್ಚು ಸದಸ್ಯ ಸ್ಥಾನವನ್ನು ಪಡೆಯುವ ಮ‌ೂಲಕ ಅಧಿಕಾರ ಪಡೆಯಲು ಮುಂದಾಗಿದೆ.

21 ಸದಸ್ಯ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಪಡೆದುಕೊಂಡರೆ, ಎಸ್.ಡಿ.ಪಿ.ಐ. ಬೆಂಬಲಿತ 7 ಸದಸ್ಯರನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ 6 ಸದಸ್ಯ ಸ್ಥಾನವನ್ನು ಪಡೆದಕೊಂಡಿದೆ.

ಕಳೆದ ಬಾರಿ 27 ಸದಸ್ಯರನ್ನು ಪಡೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಆರು ಸ್ಥಾನವನ್ನು ಕಳೆದುಕೊಂಡಿದೆ. ಆ ಮೂಲಕ ಕಾಂಗ್ರೆಸ್ ಗೆ ಪರೋಕ್ಷವಾಗಿ ತನ್ನ ಪ್ರಭಾವವನ್ನು ತೋರಿಸಿದ ಎಸ್.ಡಿ.ಪಿ.ಐ. ಒಂದರಿಂದ 7 ಕ್ಕೆರಿದ್ದು ಆರು ಸ್ಥಾನವನ್ನು ಹೆಚ್ಚಿಸಿಕೊಂಡಿದೆ .

ಬಿಜೆಪಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಆರಕ್ಕೆ ತೃಪ್ತಿ ಪಡೆದುಕೊಂಡಿದೆ. ಫೆಬ್ರವರಿ 25 ಒಟ್ಟು 10 ವಾರ್ಡ್ ಗಳಲ್ಲಿ 34 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಒಟ್ಟು 99 ಅಭ್ಯರ್ಥಿಗಳು ಕಣದಲ್ಲಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ