ಶಾಸಕ ಪ್ರಭು ಚವ್ಹಾಣರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ, ಉದ್ಘಾಟನೆ - Mahanayaka

ಶಾಸಕ ಪ್ರಭು ಚವ್ಹಾಣರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ, ಉದ್ಘಾಟನೆ

bidar
01/07/2024

ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಜುಲೈ 1ರಂದು ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.


Provided by

ಬಳತ್(ಬಿ) ಗ್ರಾಮದಲ್ಲಿ 3 ಕೋಟಿಯ ರಸ್ತೆ ಕಾಮಗಾರಿ, ಹಾಲಳ್ಳಿಯಲ್ಲಿ 1.10 ಕೋಟಿಯ ಪ್ರಾಥಮಿಕ ಶಾಲಾ‌ ಕಟ್ಟಡ, ಬೋರಾಳನಲ್ಲಿ 80 ಲಕ್ಷದ ಶಾಲಾ ಕಟ್ಟಡ, ಕಿರಗುಣವಾಡಿಯಲ್ಲಿ 22.50 ಲಕ್ಷದ ಅಂಗನವಾಡಿ ಕಟ್ಟಡ, ಬಳತ್(ಕೆ)ನಲ್ಲಿ 22.50 ಲಕ್ಷದ ಅಂಗನವಾಡಿ ಕಟ್ಟಡ, ಎಕಲಾರ ಸರ್ಕಾರಿ ಪ್ರೌಢ ಶಾಲೆಯಲ್ಲಿ 12.27 ಲಕ್ಷದ ಸೋಲಾರ್ ಪ್ಯಾನಲ್ ಅಳವಡಿಕೆ ಹಾಗೂ 4 ಲಕ್ಷದ ಶುದ್ಧ ಕುಡಿಯುವ ನೀರಿನ ಘಟಕ, ಕೊಳ್ಳುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10.80 ಲಕ್ಷದ ಸೋಲಾರ್ ಪ್ಯಾನಲ್ ಅಳವಡಿಕೆ ಹಾಗೂ 4 ಲಕ್ಷದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ 9.30 ಲಕ್ಷದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದರು.

ಹಾಲಹಳ್ಳಿ, ಹಿಪ್ಪಳಗಾಂವ, ಎಕಲಾರ ಗ್ರಾಮಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಶಾಸಕರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿ, ಎಲ್ಲ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ಉತ್ತಮ ಶಾಲೆ, ಅಂಗನವಾಡಿ ಕೇಂದ್ರಗಳಿರಬೇಕು ಎಂಬ ಉದ್ದೇಶದಿಂದ ಕಾರ್ಯಪ್ರವೃತ್ತನಾಗಿದ್ದೇನೆ. ಅದರಂತೆ ಜನತೆಯ ಬೇಡಿಕೆಗೆ ಅನುಗುಣ ಆದ್ಯತೆಯಂತೆ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿದ್ದೇನೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಆದ್ಯತೆಯಾಗಿದೆ ಎಂದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದು, ಎಲ್ಲ ಶಾಲೆಗಳಲ್ಲಿ ಉತ್ತಮ ಕಟ್ಟಡ, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಇರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೊರತೆಯಿರುವ ಕಡೆ ಅಗತ್ಯ ಅನುದಾನ ಒದಗಿಸಲಾಗುತ್ತಿದೆ. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಪ್ಯಾನಲ್ ಅಳವಡಿಸಲಾಗುತ್ತಿದೆ. ಶಾಲೆಗಳ ಅಭಿವೃದ್ಧಿಗೆ ಎಷ್ಟು ಬೇಕಾದರೂ ಅನುದಾನ ಕೊಡಲು ಸಿದ್ಧ ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್ಲ ವರ್ಗದ ಮಕ್ಕಳು ಪ್ರವೇಶ ಪಡೆಯುತ್ತಾರೆ. ಮಕ್ಕಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಸಿಗಬೇಕು. ಹೆಚ್ಚಿನ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಪ್ರವೇಶ ಪಡೆಯುವಂತಾಗಬೇಕು. ಫಲಿತಾಂಶದಲ್ಲಿ ಸುಧಾರಣೆ ತರಬೇಕು ಎಂದು ಶಿಕ್ಷಕರಿಗೆ ತಿಳಿಸಿದರು.

ಠಾಣಾ ಕುಶನೂರ ಶಾಲಾ ಕಟ್ಟಡ ಉದ್ಘಾಟನೆ: ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿ 2 ಕೋಟಿ ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ, 1 ಕೋಟಿಯ ಮಾಧ್ಯಮಿಕ ಶಾಲೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.

50 ಲಕ್ಷ ಮೊತ್ತದ ಓವರ್ ಹೆಡ್ ಟ್ಯಾಂಕ್ ಹಾಗೂ ಪೈಪ್ ಲೈನ್ ಕಾಮಗಾರಿ, 30 ಲಕ್ಷದ ತೆರೆದ ಬಾವಿ,   54 ಲಕ್ಷದ ಪಶು ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿದರು. 22.50 ಲಕ್ಷದ ಅಂಗನವಾಡಿ ಕಟ್ಟಡ, ಸರ್ಕಾರಿ ಪ್ರೌಢ ಶಾಲೆಯಲ್ಲಿ 22.03 ಲಕ್ಷದ ಸೋಲಾರ ಪ್ಯಾನೆಲ್ ಅಳವಡಿಕೆ, 4 ಲಕ್ಷದ ಶುದ್ಧ ಕುಡಿಯುವ ನೀರಿನ ಘಟಕ, ಮಾಧ್ಯಮಿಕ ಶಾಲೆಯಲ್ಲಿ 4.60 ಲಕ್ಷದ ಸೋಲಾರ್ ಅಳವಡಿಕೆ ಹಾಗೂ 4 ಲಕ್ಷದ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸುವ ಕೆಲಸಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

ಸಾರ್ವಜನಿಕರ ಅಹವಾಲು ಸ್ವೀಕಾರ: ಶಾಸಕರುಬತಾವು ಭೇಟಿ ನೀಡಿದ ಗ್ರಾಮಗಳಲ್ಲಿ ಜನತೆಯ ಅಹವಾಲುಗಳನ್ನು ಆಲಿಸಿದರು‌‌. ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಪರಿಹರಿಸಲು ಸೂಚಿಸಿದರು. ಠಾಣಾ ಕುಶನೂರ ಸೇರಿದಂತೆ ಹಲವೆಡೆ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ದೊಂಡಿಬಾ ನರೋಟೆ, ಗ್ರಾಪಂ ಅಧ್ಯಕ್ಷ ಕಾಶಿನಾಥ ಜೀರ್ಗೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಸುರೇಶ ಭೋಸ್ಲೆ, ಉದಯ ಸೋಲಾಪೂರೆ, ಗಿರೀಶ ವಡೆಯರ್, ಶಿವರಾಜ ಅಲ್ಮಾಜೆ, ಬಾಬುರಾವ ವಾಗ್ಮಾರೆ, ಧನರಾಜ ಒಡೆಯರ್, ವೀರೇಂದ್ರ ರಾಜಾಪೂರೆ, ಬಾಬುರಾವ ತೋರ್ಣಾವಾಡಿ, ಸೂರ್ಯಕಾಂತ ಅಲ್ಮಾಜೆ ಹಾಗೂ ಇತರರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ