ಪುನೀತ್ ರಾಜ್ ಕುಮಾರ್ ಹಠಾತ್ ನಿಧನ: ಮಹತ್ವದ ನಿರ್ಧಾರ ಕೈಗೊಂಡ ಕೇರಳ ಸರ್ಕಾರ!
ತಿರುವನಂತಪುರಂ: ಕನ್ನಡದ ನಟ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದ ಬೆನ್ನಲ್ಲೇ ಕೇರಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣ ಕೋರ್ಟ್ ಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್ ಗಳು ಸೇರಿದಂತೆ ಹಲವು ಸ್ವಯಂ ಚಾಲಿತ ಬಾಹ್ಯ ಡಿಫಿಬ್ರಿಲೇಟರ್ –ಎಇಡಿ-ಆಟಫಮೇಟೆಡ್ ಎಕ್ಸ್ ಟರ್ನಲ್ ಡಿಫಿಬ್ರಿಲೇಟರ್ ಗಳ ಬಳಕೆಗೆ ಸಿದ್ಧವಾಗಿಟ್ಟುಕೊಳ್ಳುವ ಅವಶ್ಯಕತೆಯನ್ನು ಎತ್ತಿ ಹಿಡಿದಿದೆ.
ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಆಂಟೋನಿ ರಾಜು, ಕೇರಳದ ಕ್ರೀಡಾ ಸಚಿವ ವಿ.ಅಬ್ದುರಹ್ಮಾನ್ ಅವರೊಂದಿಗೆ ಚರ್ಚಿಸಿ ಈ ನಿಯಮವನ್ನು ತುರ್ತಾಗಿ ಜಾರಿಗೆ ತರುವ ಭರವಸೆಯನ್ನು ಅವರು ನೀಡಿದರು.
ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ನಮಗೆ ತಿಳಿದು ಬಂದಿದೆ. ಜಿಮ್ ನಲ್ಲಿ ಪ್ರಾಥಮಿಕ ಚಿಕಿತ್ಸಾ ಉಪಕರಣಗಳು ಸಿದ್ಧವಾಗಿರದ ಕಾರಣ ಅವರ ಪ್ರಾಣ ಉಳಿಸಲಾಗಲಿಲ್ಲ. ನಮ್ಮ ರಾಜ್ಯದ ಯಾವುದೇ ಕ್ರೀಡಾಪಟು ಈ ರೀತಿಯ ಸಮಸ್ಯೆಯಿಂದ ಬಳಲಬಾರದು. ಈ ನಿಟ್ಟಿನಲ್ಲಿ ಜಿಮ್ ಹಾಗೂ ಒಳಾಂಗಣ ಕೋರ್ಟ್ ಗಳಲ್ಲಿ ಪ್ರಥಮ ಚಿಕಿತ್ಸೆ ಉಪಕರಣಗಳ ಬಳಕೆಗೆ ಸಿದ್ಧವಾಗಿಡುವುದನ್ನು ಕಡ್ಡಾಯಗೊಳಿಸಬೇಕು. ಈ ಸಂಬಂಧ ಇಲಾಖೆಗಳು ತುರ್ತು ಕ್ರಮಕೈಗೊಳ್ಳಬೇಕು ಎಂದು ಆಂಟೋನಿ ಹೇಳಿದರು.
ಸಾಮಾನ್ಯ ಜನರಿಗೆ ಮೂಲಭೂತ ಪ್ರಥಮ ಚಿಕಿತ್ಸೆಯಲ್ಲಿ ಒಂದು ದಿನದ ತರಬೇತಿ ನೀಡಬೇಕಾಗಿದೆ. ನಾವು ಈಗಾಗಲೇ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ದುಃಖದ ಸುದ್ದಿಯೊಂದಿಗೆ ನಾವು ಈ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ದೊಡ್ಡಮಟ್ಟದಲ್ಲಿ ಮಾಡಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka