ಪುನೀತ್ ಕೆರೆಹಳ್ಳಿ ಬೆಂಬಲಕ್ಕೆ ನಿಂತ ಹಿಂದೂಪರ ಸಂಘಟನೆಗಳು
ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಡದ ತಪ್ಪಿಗೆ ಪುನೀತ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪುನೀತ್ ಕೆರೆಹಳ್ಳಿ ಡಾ.ರಾಜ್ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ವಿಡಿಯೋ ಇದ್ದರೆ, ನೀಡಿ ಎಂದು ಸವಾಲು ಹಾಕಿದ್ದಾರೆ. ರಾಜ್ ಕುಟುಂಬದ ಹೆಸರು ದುರ್ಬಳಕೆ ಮಾಡಿಕೊಂಡು ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಪುನೀತ್ ಕೆರೆಹಳ್ಳಿಗೆ ಶ್ರೀರಾಮಸೇನೆ ಬೆಂಬಲ ಸೂಚಿಸಿದ್ದು, ಇಲ್ಲಿನ ಸೇನೆಯ ವಿಭಾಗ ಅಧ್ಯಕ್ಷರು ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿ ರಾಜ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಅನ್ನಲು ಸಾಕ್ಷಿ ಕೊಡಿ ಎಂದು ಸವಾಲು ಹಾಕಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಷಡ್ಯಂತ್ರ ನಡೆಸಿ, ಚಾಮರಾಜಪೇಟಗೆ ಕರೆಸಿ ಅವರ ಮೇಲೆ ಹಲ್ಲೆ ಯತ್ನ ಮಾಡಿ ಅವರ ಹೋರಾಟವನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw