ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣ: ಪುನೀತ್ ಕೆರೆಹಳ್ಳಿ ಸಹಿತ ನಾಲ್ವರ ಬಂಧನ

ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡದವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರ ವಲಯದ ನೆಲಗೆದರನಹಳ್ಳಿ ಬಳಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎಂಬವರು ನೀಡಿದ ದೂರಿನನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದು, ಬೆಂಗಳೂರಿನ ವಿವಿಧ ರಸ್ತೆಗಳ ಬದಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವ ಚಿತ್ರಗಳ ಬ್ಯಾನರ್ ಹಾಕಿತ್ತು. ಈ ಪೈಕಿ ಟಿಪ್ಪು ಸುಲ್ತಾನ್ ಬ್ಯಾನರ್ ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿ ಬ್ಯಾನರ್ ಹರಿದು ಹಾಕಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka