ಪುನೀತ್ ನಿಧನದ ಸುದ್ದಿ ತಿಳಿದು ಅಭಿಮಾನಿಯೂ ಹೃದಯಾಘಾತದಿಂದ ಸಾವು
ಹನೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದ ಅಭಿಮಾನಿ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ನಿವಾಸಿ 30 ವರ್ಷ ವಯಸ್ಸಿನ ಮುನಿಯಪ್ಪ ಎಂಬಾತ ಮೃತ ಯುವಕನಾಗಿದ್ದು, ಈತ ಬಾಲ್ಯದಿಂದಲೂ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಎನ್ನಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎಲ್ಲ ಸಿನಿಮಾಗಳನ್ನು ತಪ್ಪದೇ ನೋಡುತ್ತಿದ್ದ ಎನ್ನಲಾಗಿದೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದಾಗ ಸ್ಥಳದಲ್ಲಿಯೇ ಮುನಿಯಪ್ಪ ಕುಸಿದು ಬಿದ್ದಿದ್ದು, ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲು ಗ್ರಾಮಸ್ಥರು ಯತ್ನಿಸಿದರಾದರೂ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ. ಮೃತ ಯುವಕನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka