ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಹೊರಟಿದ್ದ ತಮಿಳು ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ!

vijay setupati
03/11/2021

ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತಮಿಳುನಾಡಿನಿಂದ ಆಗಮಿಸಿದ್ದ ಖ್ಯಾತ ತಮಿಳು ನಟ ವಿಜಯ್ ಸೇತುಪತಿ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ವಿಜಯ್ ಸೇತುಪತಿ ಏರ್ ಪೋರ್ಟ್ ನಲ್ಲಿ ಇಳಿದು ಪುನೀತ್ ನಿವಾಸಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ವಿಜಯ್ ಸೇತುಪತಿ ಪ್ರಯಾಣಿಸಿದ್ದ ವಿಮಾನದಲ್ಲಿಯೇ ಆಗಮಿಸಿದ್ದ ಸಹ ಪ್ರಯಾಣಿಕನೋರ್ವ ಕುಡಿದ ಮತ್ತಿನಲ್ಲಿ ಈ ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ.

ನಿನ್ನೆ ತಡ ರಾತ್ರಿ 11 ಗಂಟೆಯ ವೇಳೆಗೆ  ವಿಜಯ್ ಸೇತುಪತಿ ಪಿಎ ಹಾಗೂ ಸಹ ಪ್ರಯಾಣಿಕನಿಗೂ ಜಗಳ ನಡೆದಿತ್ತು ಎನ್ನಲಾಗಿದೆ. ಈ ಬಗ್ಗೆ ವಿಜಯ್ ಸೇತುಪತಿ ಪಿಎ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.

ಮಾಸ್ಟರ್ ಚೆಫ್ ರಿಯಾಲಿಟಿ ಶೋನ ಶೂಟಿಂಗ್ ಗಾಗಿ ವಿಜಯ್ ಸೇತುಪತಿ ಬೆಂಗಳೂರಿಗೆ ಆಗಮಿಸಿದ್ದರು ಎಂದು ಹೇಳಲಾಗಿದೆ. ಬೆಂಗಳೂರು ಭೇಟಿಯ ಸಂದರ್ಭದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲು ಮುಂದಾಗಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version