10:56 AM Wednesday 12 - March 2025

ಪುನೀತ್ ರಾಜ್ ಕುಮಾರ್ ಸಾವಿನ ಬಗ್ಗೆ ಅನುಮಾನ: ದೂರು ದಾಖಲು

puneeth rajkumar
04/11/2021

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪುನೀತ್ ಅಭಿಮಾನಿಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅರುಣ್ ಪರಮೇಶ್ವರ್ ಎಂಬವರು ಈ ದೂರು ದಾಖಲಿಸಿದ್ದು,  ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣವೇ ಅವರು ರಮಣಶ್ರೀ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಸೂಕ್ತ ಚಿಕಿತ್ಸೆ ದೊರಕಿಲ್ಲ ಎನಿಸುತ್ತಿದೆ. ಅಲ್ಲದೇ ತಡವಾಗಿ ಅವರನ್ನು ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿದೆ. ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿಲ್ಲ ಎಂಬ ಮಾತು ಕೇಳಿ ಬಂದಿದೆ. ಇದರ ಬಗ್ಗೆ ತನಿಖೆ ನಡೆಯಬೇಕು ಎಂದು ಅಭಿಮಾನಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಪುನೀತ್ ಎಷ್ಟು ಗಂಟೆಗೆ ರಮಣಶ್ರೀ ಆಸ್ಪತ್ರೆಗೆ ದಾಖಲಾದರು. ಎದೆನೋವಿನ ಬಗ್ಗೆ ಎಷ್ಟು ನಿಮಿಷಗಳ ಕಾಲ ರಮಣಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಯಾವ ಮಾತ್ರಗಳನ್ನು ನೀಡಲಾಗಿದೆ. ಬಳಿಕ ಎಷ್ಟು ಗಂಟೆಗೆ ಅವರು ವಿಕ್ರಂ ಆಸ್ಪತ್ರೆಗೆ ತೆರಳಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ಕ್ರಮಜರಗಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version