ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ | ನಟಿ ರಮ್ಯಾ ಪ್ರಶ್ನೆ - Mahanayaka
5:17 PM Wednesday 11 - December 2024

ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ | ನಟಿ ರಮ್ಯಾ ಪ್ರಶ್ನೆ

ramya
27/08/2021

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಸಂತ್ರಸ್ತೆಯನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿ ಕೆಲವರು ಹೇಳಿಕೆ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ರಮ್ಯಾ, ಪ್ರತಿ ಬಾರಿಯೂ ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಪುರುಷನಿಂದಾಗುವ ದೈಹಿಕ ಹಾಗೂ ಮಾನಸಿಕ ದೌರ್ಜನ್ಯಗಳಾಗಿಲಿ, ಅತ್ಯಾಚಾರವೇ ಆಗಲಿ, ಏನೇ ನಡೆದರೂ ಮಹಿಳೆಯರೇ ದೂಷಣೆಗೆ ಒಳಗಾಗುತ್ತಾರೆ ಎಂದು ಹೇಳಿದ್ದಾರೆ.

ಇದು ನಿನ್ನದೇ ತಪ್ಪು, ನೀನು ಹಾಗೆ ಹೇಳಬಾರದಿತ್ತು. ನೀನು ಅದನ್ನು ಧರಿಸಬಾರದಿತ್ತು. ನಿನ್ನ ಉಡುಪು ತೀರಾ ಬಿಗಿಯಾಗಿದೆ ಮತ್ತು ಉಡುಪು ಚಿಕ್ಕದಾಗಿದೆ. ನೀನು ತಡವಾಗಿ ಮನೆಯಿಂದ ಹೊರಗೆ ಹೋಗಬಾರದಿತ್ತು. ನೀನು ಮೇಕಪ್ ಧರಿಸಬಾರದಿತ್ತು. ಲಿಪ್ಸ್ ಸ್ಟಿಕ್ ಹಾಕೆ ಹಾಕಿಕೊಂಡಿದ್ದೆ? ಎಂದು ಪ್ರಶ್ನಿಸುತ್ತಾರೆ. ಇದನ್ನು ನಾವು ಆಗಾಗ ಕೇಳುತ್ತಲೇ ಇರುತ್ತೇವೆ. ಯಾಕೆಂದರೆ, ಪುರುಷರು ಪುರುಷರಾಗಿಯೇ ಇರುತ್ತಾರೆ. ನಾವು ಮಾತ್ರ ಬದಲಾಗಬೇಕು. ನಾವು ಮಾತ್ರವೇ ಎಲ್ಲದರಲ್ಲಿ ರಾಜಿ ಮಾಡಿಕೊಳ್ಳಬೇಕು. ಅಡ್ಜೆಸ್ಟ್ ಮಾಡಿಕೊಳ್ಳಬೇಕು. ಇನ್ನು ಮುಂದೆ ಇಂತಹದ್ದನ್ನು ಸಹಿಸಲು ಸಾಧ್ಯವಿಲ್ಲ  ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡಾಗಬೇಡಿ ಧ್ವನಿಯೆತ್ತಿ ಎಂದು ಅವರು ಹೇಳಿದರು.

ಇನ್ನಷ್ಟು ಸುದ್ದಿಗಳು…

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ಧರ್ಮದ ಹೆಸರಿನಲ್ಲಿ ಗೂಂಡಾಗಿರಿ | 5 ಮಂದಿಯ ವಿರುದ್ಧ ದೂರು

ಮೈಸೂರು ಗ್ಯಾಂಗ್ ರೇಪ್  ಆರೋಪಿಗಳ ಸುಳಿವು ಲಭ್ಯ | ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೃತ್ಯ?

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ

ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!

ಸರ್ಕಾರ ಮಾರಾಟದಲ್ಲಿ ನಿರತವಾಗಿದೆ, ನಿಮ್ಮ ಆರೋಗ್ಯ ನೀವೇ ನೋಡಿಕೊಳ್ಳಿ | ರಾಹುಲ್ ಗಾಂಧಿ

ಇತ್ತೀಚಿನ ಸುದ್ದಿ