ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ತೆಲುಗು ನಟ ಅಲ್ಲು ಅರ್ಜುನ್ ಅವರ ಹೊಸ ಚಿತ್ರ ಪುಷ್ಪಾದಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರ ಮೊದಲ ಲುಕ್ ಬಿಡುಗಡೆಯಾಗಿದ್ದು, ಈ ಲುಕ್ ಕಂಡು ಸಿನಿ ಪ್ರಿಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಟಿ ರಶ್ಮಿಕ ಶ್ರೀವಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದು, ವಿಚಿತ್ರ ಗೆಟಪ್ ಕಾಣಿಸಿಕೊಂಡಿದ್ದಾರೆ.
ಹಳ್ಳಿ ಹುಡುಗಿಯ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ, ಅಲಂಕಾರ ಮಾಡಿಕೊಳ್ಳುವಂತಹ ಫೋಟೋವನ್ನು ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಈ ಚಿತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ವೈರಲ್ ಆಗಿದೆ. ಜೊತೆಗೆ ಚಿತ್ರವನ್ನು ನೋಡಿದ ಅಭಿಮಾನಿಗಳು ನ್ಯಾಶನಲ್ ಕ್ರಶ್ ಹುಡುಗಿಯ ಮೇಲೆ ಮತ್ತೊಮ್ಮೆ ಕ್ರಶ್ ಆಯ್ತು ಅಂದಿದ್ದಾರೆ.
ಟಿಟೌನ್ ಸ್ಟಾರ್ ನಿರ್ದೇಶಕ ಸುಕುಮಾರ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಈಗಾಗಲೇ ಈ ಚಿತ್ರ ಕುತೂಹಲವನ್ನು ಸೃಷ್ಟಿಸಿದೆ. ಚಿತ್ರತಂಡದ ಬಿಡುಗಡೆ ಮಾಡಿರುವ ಸಿನಿಮಾದ ಫಸ್ಟ್ ಲುಕ್ ಹಾಗೂ ಅಲ್ಲು ಅರ್ಜುನ್ ಲುಕ್, ಟೀಸರ್ ಹಾಗೂ ಮೊದಲ ಹಾಡಿಗೆ ಉತ್ತಮ ರೆಸ್ಪಾನ್ಸ್ ದೊರಕಿದೆ.
ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕ ನಟನಾಗ ಅಭಿನಯಿಸಿದರೆ, ಮಲಯಾಲಂನ ಖ್ಯಾತ ನಟ ಫಹಾದ್ ಫಾಜಿಲ್ ಖಳನಾಯಕನ ಪಾತ್ರದಲ್ಲಿ ನಟಿಸಲಿದ್ದಾರೆ. ರಕ್ತ ಚಂದನ ಸ್ಮಗ್ಲಿಂಗ್ ನ ಕಥೆ ಇದಾಗಿದೆ ಎಂದು ಸದಯ ಹೇಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?
ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು
“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”
ಶಾಕಿಂಗ್ ನ್ಯೂಸ್: ಅಪರಿಚಿತ ತಂಡದಿಂದ ಬೀಡಿ ಬ್ರ್ಯಾಂಚ್ ಗೆ ಹೋಗುತ್ತಿದ್ದ ಬಾಲಕನ ಅಪಹರಣಕ್ಕೆ ಯತ್ನ
ಕೃಷ್ಣನ ಚಕ್ರ, ಟಿಪ್ಪುವಿನ ಸಿಂಹಾಸನ ಮಾರಾಟ ಮಾಡಿದ ಆರೋಪಿ ಅರೆಸ್ಟ್!
ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರಿನ ಪ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ | ಯುವಕ, ಯುವತಿಯ ದಾರುಣ ಸಾವು