ಪತಿ ಅಪಘಾತದಲ್ಲಿ ಸಾವು: ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ - Mahanayaka
4:20 PM Thursday 12 - December 2024

ಪತಿ ಅಪಘಾತದಲ್ಲಿ ಸಾವು: ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

police and wife
19/04/2022

ಮಂಗಳೂರು: ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದು ಪತ್ನಿಯೂ ತಮ್ಮ6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಗಂಗಾಧರ ಬಿ. ಕಮ್ಮಾರ (36 ವರ್ಷ) ಅಪಘಾತದಲ್ಲಿ ಮೃತಪಟ್ಟವರು. ಶನಿವಾರ ರಾತ್ರಿ 8.50 ಸುಮಾರಿಗೆ NH66 ರಲ್ಲಿ ಕುಂಟಿಕಾನ ಬಳಿ ರಸ್ತೆ ದಾಟುವಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ( XUV 500) ಡಿಕ್ಕಿ ಹೊಡೆದ ಪರಿಣಾಮ ಗಂಗಾಧರ ರವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇತ್ತ ತನ್ನ ಪತಿ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ 6 ತಿಂಗಳ ಪುತ್ರ ಅಭಿರಾಮನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,

ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಸದ ಲಾರಿಗೆ ಮತ್ತೊಂದು ಬಲಿ:  ಬೈಕ್ ನಲ್ಲಿ ಹೋಗುತ್ತಿದ್ದ ಮಹಿಳೆಯ ದಾರುಣ ಸಾವು

ಮಠಗಳಿಂದ ಕಮಿಷನ್ ವಸೂಲಿ: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ತಾಳಿಕಟ್ಟುವ ಶುಭ ವೇಳೆ, ವರನನ್ನು ಎತ್ತಾಕೊಂಡು ಹೋದ ಪೊಲೀಸರು!

ಶಾಲೆಯ ಎದುರೇ 10ನೇ ತರಗತಿಯ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಸ್ನೇಹಿತರು

ಹಿಂದುತ್ವದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಬಿಜೆಪಿಯ ನಿರೀಕ್ಷೆಗೆ ಶಾಕ್ ನೀಡಿದ ಯಡಿಯೂರಪ್ಪ ಹೇಳಿಕೆ!

 

ಇತ್ತೀಚಿನ ಸುದ್ದಿ