ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಚಿಕ್ಕಮಗಳೂರು: ವಿಶ್ವದ ಹಲವು ದೇಶಗಳು ಯುದ್ಧ ಬೇಡ ಎನ್ನುತ್ತಿವೆ. ಆದರೆ ರಷ್ಯಾ ಮಾತ್ರ ಯುದ್ಧ ನಿಲ್ಲಿಸಲ್ಲ ಎನ್ನುತ್ತಿದೆ. ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ ಎಂದು ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಹಾಗೂ ಪುತ್ರ ರೇವಣ್ಣ, ಪುತ್ರಿ ಅನುಸೂಯ ಅವರೊಂದಿಗೆ ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಭೆಟಿ ನೀಡಿದ್ದಾರೆ. ಮೂರು ವರ್ಷದ ನಂತರ ಶೃಂಗೇರಿಗೆ ಆಗಮಿಸಿದ ಮಾಜಿ ಪ್ರಧಾನಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
ಗುರುಗಳ ದರ್ಶನ ಪಡೆದು, ಶಾರದಾಂಬೆಗೆ ನಮಸ್ಕರಿಸುತ್ತೇನೆ. ಈಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಿ ನಾಳೆ ವಾಪಸ್ ಹೋಗುತ್ತೇನೆ. ಪ್ರತಿದಿನ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದೇನೆ, ಶಾರದಾಂಬೆ ದರ್ಶನ ಮಾಡಲು ಬಂದಿದ್ದೇನೆ ಎಂದರು.
ಸಡನ್ನಾಗಿ 4 ದಿನದ ಹಿಂದೆ ಯುದ್ಧ ಮಾಡೋದಾಗಿ ರಷ್ಯಾದ ಅಧ್ಯಕ್ಷರು ಹೇಳಿದ್ದರು. ಆಗಲೇ ಉಕ್ರೇನ್ ಮೇಲೆ ಯುದ್ಧ ಶುರು ಮಾಡಿದ್ದಾರೆ. ಪ್ರಪಂಚದ ಅನೇಕ ರಾಷ್ಟ್ರಗಳು ಯುದ್ಧ ಬೇಡವೆಂದು ಹೇಳುತ್ತಿದೆ. ಆದರೆ ರಷ್ಯಾ ಮಾತ್ರ ನಾನು ನಿಲ್ಲಿಸುವುದಿಲ್ಲ ಅಂತ ಹೇಳುತ್ತಿದೆ. ಯುದ್ಧ ಶಮನ ವಾಗಬೇಕೆಂದು ನಮ್ಮ ಪ್ರಧಾನ ಮಂತ್ರಿಗಳು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಎಳೆದುತಂದ ಪೊಲೀಸರು: ಅವಮಾನ ತಾಳಲಾರದೆ ಪತ್ನಿ ಆತ್ಮಹತ್ಯೆ
ಇಂದು ರಾತ್ರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
ಮೃತ ಹರ್ಷನ ಮೊಬೈಲ್ ಫೋನ್ ಪತ್ತೆಯಾಗಿಲ್ಲ; ಶಿವಮೊಗದಲ್ಲಿ ಎಸ್ ಪಿ ಮಾಹಿತಿ
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ