ಬೈಕ್–ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರನ ದಾರುಣ ಸಾವು
ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ದರ್ಜೆ ಬೈಪಾಸ್ ನಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಝೀಝ್ ಎಂಬವರ ಪುತ್ರ ನೌಶಾದ್ (22) ಮೃತಪಟ್ಟ ಯುವಕ.
ನೌಶಾದ್ ಪುತ್ತೂರು ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಸಮೀಪದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka