ಪುತ್ತೂರು: ಕೋಟಿ ಚೆನ್ನಯ ಜೋಡುಕರೆ ಕಂಬಳ | ಕಂಬಳದಿಂದ ಮನೋಸ್ಥೈರ್ಯ ವೃದ್ಧಿಸುತ್ತದೆ | ಕೇಶವ ಪ್ರಸಾದ್ ಮುಳಿಯ
ಪುತ್ತೂರು: ಕಂಬಳದಿಂದ ಮನೋಸ್ಥೈರ್ಯ ಮತ್ತು ಮನೋಬಲ ವೃದ್ಧಿಸುತ್ತದೆ. ಕಂಬಳ ಈಗಾಗಲೇ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು.
ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 29ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾಯಿ ದೇವುಸ್ ಚರ್ಚ್‌ನ ಧರ್ಮಗುರು ಫಾ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ಕಂಬಳವು ದೇಶ, ಭಾಷೆ ಮತ್ತು ಸಂಸ್ಕೃತಿಯನ್ನು ಒಂದುಗೂಡಿಸುತ್ತದೆ. ಇದರ ಜತೆಗೆ ಅವೆಲ್ಲವನ್ನೂ ಮೀರಿದ ಮನುಷ್ಯತ್ವವನ್ನು ಬಿಂಬಿಸುತ್ತದೆ ಎಂದು ಸಾಮರಸ್ಯದ ಸಂದೇಶ ಸಾರಿದರು.
ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುದಾನ ದೇವಾಲಯದ ಧರ್ಮಗುರು ವಿಜಯ ಹಾರ್ವಿನ್, ಪುತ್ತೂರು ಜುಮ್ಮಾ ಮಸೀದಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಕಂಬಳ ಸಮಿತಿ ಸಂಚಾಲಕ ಎನ್.ಸುಧಾಕರ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಕ್ಕಳಿಗೆ ಬೇಕಿರುವುದು ಭವಿಷ್ಯ ರೂಪಿಸುವ ಶಿಕ್ಷಣ: ಎಚ್.ಡಿ.ಕುಮಾರಸ್ವಾಮಿ
ಎಸ್ಸೆಸೆಲ್ಸಿ ಆದವರಿಗೆ ಉದ್ಯೋಗವಕಾಶ
ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ: ಹವಾಮಾನ ಇಲಾಖೆ ಮುನ್ಸೂಚನೆ
ಸಿನಿಮಾದಲ್ಲಿ ಗುಜರಾತ್, ಲಖಿಂಪುರ್ ಘಟನೆಯನ್ನೂ ತೋರಿಸಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ