ಪುತ್ತೂರಿನಲ್ಲಿ ಬಸ್ ಮೇಲೆ ಕಲ್ಲು ತೂರಾಟ: ಸುಳ್ಯ, ಪುತ್ತೂರು, ಕಡಬ ಅಂಗಡಿ ಮುಂಗಟ್ಟು ಬಂದ್ - Mahanayaka
10:22 PM Thursday 12 - December 2024

ಪುತ್ತೂರಿನಲ್ಲಿ ಬಸ್ ಮೇಲೆ ಕಲ್ಲು ತೂರಾಟ: ಸುಳ್ಯ, ಪುತ್ತೂರು, ಕಡಬ ಅಂಗಡಿ ಮುಂಗಟ್ಟು ಬಂದ್

puttur
27/07/2022

ಪುತ್ತೂರು: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ  ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ  ಸಾಕಷ್ಟು ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಪುತ್ತೂರು ತಾಲೂಕಿನ ನಗರ ಪ್ರದೇಶವಾದ  ಬೊಳುವಾರಿನಲ್ಲಿ ಸರ್ಕಾರಿ ಬಸ್ ವೊಂದರ ಮೇಲೆ ಕಲ್ಲುತೂರಾಟ ನಡೆದಿದೆ.

ಪುತ್ತೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೊಳುವಾರಿನ ವಿಶ್ವಕರ್ಮ ಸಭಾಭವನದ ಮುಂಭಾಗ ತಲುಪುತ್ತಿದ್ದಂತೆಯೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಣಾಮವಾಗಿ ಬಸ್ಸಿನ ಗಾಜು ಒಡೆದು ಹೋಗಿದೆ.

ಹಿಂದುತ್ವ ಸಂಘಟನೆಗಳಕರೆಯಂತೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಾಹನ ಸಂಚಾರ ಎಂದಿನಂತೆಯೇ ಸಾಗಿದ್ದು, ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದು, ಮುಂಜಾಗೃತ ಕ್ರಮವಾಗಿ ಬಿಗು ಪೊಲೀಸ್ ಬಂದೋ ಬಸ್ತ್ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ