ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ಹಾಸನ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹಾಸನ ತಾಲೂಕಿನ ಕೌಶಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುಷ್ಪಲತಾ ಹಾಗೂ ಪಿಡಿಒ ಮಂಜುನಾಥ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಇವರು ಪೌತಿ ಖಾತೆ ಮಾಡಿಕೊಡಲು ಮುಂಗಡವಾಗಿ 2,100 ರೂ. ಮುಂಗಡವಾಗಿ ಪಡೆದಿದ್ದಲ್ಲದೇ, ಪುನಃ 500 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಸುರೇಶ್ ಎಂಬವರು ಎಸಿಬಿಗೆ ದೂರು ನೀಡಿದ್ದರು.
ನಿನ್ನೆ ಸಂಜೆ ಲಂಚ ಪಡೆಯುವಾಗ ಎಸಿಬಿ ಡಿವೈಎಸ್‌ಪಿ ಸತೀಶ್, ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ, ವೀಣಾ ಹಾಗೂ ಸಿಬ್ಬಂದಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ
ಹಿಜಾಬ್ ವಿವಾದ: ತಾಯಿ ಸರಸ್ವತಿ ಎಲ್ಲರಿಗೂ ಒಳ್ಳೆಯ ಬುದ್ದಿ ಕೊಡಲಿ: ರಾಹುಲ್ ಗಾಂಧಿ
ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ಹಿಜಾಬ್ ವಿವಾದ: 6 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಬೇಕಿತ್ತು | ಪ್ರಮೋದ್ ಮುತಾಲಿಕ್