ಸ್ನೇಹಿತರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ!

omkar
21/11/2022

ಚಿಕ್ಕಮಗಳೂರು: ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ.

ಓಂಕಾರ (30) ಹತ್ಯೆಗೀಡಾದ ಯುವಕನಾಗಿದ್ದು, ರಾತ್ರಿ ಮನೆಯಲ್ಲಿದ್ದವನನ್ನು ಕರೆದೊಯ್ದ ಸ್ನೇಹಿತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಲ್, ಸಂತೋಷ್, ಧನರಾಜ್ ಸೇರಿ ಐವರು ಓಂಕಾರನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದು, ಈ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ  ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version