ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ನಿಧನ

queen elizabeth ii
08/09/2022

ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ.

ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ.

ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಕಾಣಿಸಿಕೊಳ್ಳುವವರೆಗೂ ಅವರು ಕ್ರಿಯಾಶೀಲರಾಗಿದ್ದರು. ಅನಾರೋಗ್ಯದ ಬಳಿಕ ಕಾರ್ಯಕ್ರಮವೊಂದರಲ್ಲಿ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಲಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version