ಕುರಾನ್‌ ನ 26 ವಚನ ರದ್ದುಪಡಿಸಲು ಅರ್ಜಿ ಸಲ್ಲಿಸಿದವನಿಗೆ 50 ಸಾವಿರ ರೂ. ದಂಡ! - Mahanayaka

ಕುರಾನ್‌ ನ 26 ವಚನ ರದ್ದುಪಡಿಸಲು ಅರ್ಜಿ ಸಲ್ಲಿಸಿದವನಿಗೆ 50 ಸಾವಿರ ರೂ. ದಂಡ!

suprim court
12/04/2021

ನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್‌, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಉತ್ತರ ಪ್ರದೇಶದ ಶಿಯಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಮ್‌ ರಿಜ್ವಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಈ ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ. ಇದೊಂದು ಕ್ಷುಲ್ಲಕ ವಿಷಯ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಆರ್‌.ಎಫ್‌. ನಾರಿಮನ್‌, ಬಿ.ಆರ್‌. ಗವಾಯಿ ಮತ್ತು ಹೃಷಿಕೇಶ್‌ ರಾಯ್‌ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ.


Provided by

26 ವಚನಗಳು ಭಯೋತ್ಪಾದನೆಗೆ ಉತ್ತೇಜನ ನೀಡುತ್ತವೆ. ಸಮಾನತೆ, ಕ್ಷಮಾದಾನ ಮತ್ತು ಸಹಿಷ್ಣುತೆಯೇ ಇಸ್ಲಾಂ ಧರ್ಮದ ಮೂಲ ಆಶಯಗಳು. ಆದರೆ, ಪವಿತ್ರ ಗಂಥದಲ್ಲಿನ ಈ ವಚನಗಳನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗಿದೆ. ಇದರಿಂದ ಮೂಲ ಆಶಯದಿಂದ ಧರ್ಮವು ದೂರ ಸರಿಯುತ್ತಿದೆ ಎಂದು ರಿಜ್ವಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅರ್ಜಿ ಸಲ್ಲಿಸಿದ ಬಳಿಕ ರಿಜ್ವಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ