ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಜನಾಂಗದ್ವೇಷಿ ಪೋಸ್ಟ್: ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ.
ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದ್ದು, ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಸ್ಪೀಕರ್ ಖಾದರ್ ಅವರ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಬರೆದು, ಅವಮಾನಿಸಿದ್ದು, ಈ ಬಗ್ಗೆ ಚಿಕ್ಕಮಗಳೂರು ನಗರದಲ್ಲಿರುವ ಸೈಬರ್ ಕ್ರೈಮ್ ಠಾಣೆಗೆ ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ಎ. ಮಂಜು ದೂರು ನೀಡಿದ್ದಾರೆ.
ಈ ಪೋಸ್ಟ್ ನಿಂದ ಕೋಮುದ್ವೇಷ ಹಾಗೂ ಜನಾಂಗದ ನೋವಿಗೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw