ಮಾದಪ್ಪನ ದರ್ಶನ ಪಡೆದ ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ

02/10/2023
ಚಾಮರಾಜನಗರ: ಡಾ. ರಾಜ್ ಕುಮಾರ್ ಅವರ ತವರೂರಿಗೆ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್, ಪತ್ನಿ ಮಂಗಳಾ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ಮಾದಪ್ಪನ ದರ್ಶನ ಪಡೆದು, ದಾಸೋಹ ಭವನದಲ್ಲಿ ಪ್ರಸಾದ ಸೇವಿಸಿದರು.
ನಮ್ಮ ತಂದೆ ರಾಜ್ ಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ಬಂದಿರಲಿಲ್ಲ, ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೀತಿದೆ. ಅದಕ್ಕಾಗಿ ಮಾದಪ್ಪನ ದರ್ಶನ ಪಡೆಯಲು ಬಂದಿದ್ದೇವೆ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದರು.
ಈ ಜಾಗ ತುಂಬಾ ಚೆನ್ನಾಗಿದೆ. ಮಲೆ ಮಹದೇಶ್ವರ ತಾಣ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಂದು ಸಲವಾದರೂ ಇಲ್ಲಿಗೆ ಬರಬೇಕು ಅಂತ ಅನ್ನಿಸಿದೆ. ಇನ್ಮೇಲೆ ಮಾದಪ್ಪನ ದರ್ಶನ ಪಡೆಯಲು ಬರ್ತಿನಿ ಎಂದರು.