ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿ: ಸಿ.ಟಿ.ರವಿ ವ್ಯಂಗ್ಯ
ಗೋವಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿಯಾಗಿದ್ದು, ಚುನಾವಣೆಗೂ ಮುನ್ನವೇ ಗೋವಾಕ್ಕೆ ಬರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಕಲ್ಲಂಗುಟ್ ನಲ್ಲಿ ಮತ ಪ್ರಚಾರ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒಬ್ಬ ಪ್ರವಾಸಿ ರಾಜಕಾರಣಿ, ಅವರು ಚುನಾವಣೆಗೆ ಮುನ್ನವೇ ಗೋವಾಕ್ಕೆ ಬರುತ್ತಾರೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ನಿಷ್ಠವಾಗಿರಬೇಕು. ಬಿಜೆಪಿ ಯಾವುದೇ ಕಾರಣಕ್ಕೂ ಚೀನಾದೊಂದಿಗೆ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದರು.
ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಪ್ರಚಾರದ ಕುರಿತು ಮಾತನಾಡಿದ ಅವರು, ಗೋವಾದ ಒಳಚರಂಡಿ ವ್ಯವಸ್ಥೆಯನ್ನು ನವದೆಹಲಿಯಲ್ಲಿ ಜಾರಿಗೆ ತರುವಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇಳಿಕೊಳ್ಳುತ್ತೇನೆ. ಮಮತಾ ಬ್ಯಾನರ್ಜಿಯವರು ಸಹ ಗೋವಾ ಮಾದರಿಯನ್ನು ಪಶ್ಚಿಮ ಬಂಗಾಳದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಪಶ್ಚಿಮ ಬಂಗಾಳವನ್ನು ಗೋವಾಕ್ಕೆ ತರಬೇಡಿ ಎಂದು ವಿನಂತಿಸುತ್ತೇನೆ. ಗೋವಾ ಉತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೊಂದಿದ್ದು, ಪ. ಬಂಗಾಳದಲ್ಲಿ ಕೊಲೆ, ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ
ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ
ಶೈಕ್ಷಣಿಕ ಸಾಧನೆಯ ಲೇಡಿ ಸಿಂಗಂ: ಡಾ.ಎನ್.ಲಕ್ಷ್ಮಿ
ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕಾಣಿಸಿಕೊಂಡ ಬೆಳಕು: ಮನೆಗೆ ನುಗ್ಗಿ ನೋಡಿದಾಗ ಸತ್ಯ ಬಯಲು