ರಹೀಂ ಉಚ್ಚಿಲ್ ಗೆ ಸದ್ದಿಲ್ಲದೇ ಶಾಕ್ ನೀಡಿದ ರಾಜ್ಯ ಸರ್ಕಾರ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್(Rahim Uchil) ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಸದ್ದಿಲ್ಲದೇ ಶಾಕ್ ನೀಡಿದ್ದು, ಅವರನ್ನು ಪದಚ್ಯುತಿಗೊಳಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ರಹೀಂ ಉಚ್ಚಿಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ ಎಂದು ಅವರು ಹೇಳಿದ್ದಾರೆ. ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ರಹೀಂ ಉಚ್ಚಿಲ್ ಅವರಿಗೆ ಸಣ್ಣ ಸುಳಿವು ಕೂಡ ನೀಡದೇ ಏಕಾಏಕಿ ಪದಚ್ಯುತಿಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ರಹೀಂ ಉಚ್ಚಿಲ್, ಕಾರಣ ಏನೂ ಎಂಬುದು ತಿಳಿದಿಲ್ಲ. ಆದೇಶ ಬಂದ ಬಳಿಕವಷ್ಟೇ ನನಗೆ ವಿಷಯ ತಿಳಿಯಿತು. ಪಕ್ಷ ನನಗೆ ಎರಡು ಬಾರಿ ಅಕಾಡೆಮಿಯ ಅಧ್ಯಕ್ಷನಾಗಲು ಅವಕಾಶ ಕಲ್ಪಿಸಿದೆ. ಅದನ್ನು ಯಶಸ್ವಿಯಾಗಿ ಪೂರೈಸಿದ ತೃಪ್ತಿ ಇದೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊಲೆಯಾದ ಯುವಕನನ್ನು ದಲಿತ ಅಂದ್ರಿ, ಹಿಂದೂ ಅನ್ನಲಿಲ್ಲ ಯಾಕೆ? : ಕುಮಾರಸ್ವಾಮಿ
ನಿರ್ದೇಶಕ, ನಟ ಶ್ರೀನಿವಾಸನ್ ಅವರ ಆರೋಗ್ಯ ಸ್ಥಿತಿ ಗಂಭೀರ
ಉತ್ತರ ಪತ್ರಿಕೆಯಲ್ಲಿ “ಪುಷ್ಪಾ… ಪುಸ್ಪರಾಜ್” ಎಂದು ಬರೆದಿಟ್ಟ ವಿದ್ಯಾರ್ಥಿನಿ: ಶಿಕ್ಷಕರು ಕಂಗಾಲು