ರಾಹುಲ್ ಗಾಂಧಿ ಬಾಡಿ ಫಿಟ್ನೆಸ್ ಇದ್ದಾರೆ ಆದ್ರೆ…: ಶೋಭಾ ಕರಂದ್ಲಾಜೆ ವಾಗ್ದಾಳಿ
ಉಡುಪಿ: ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ಆದರೆ ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಸಾಧ್ಯವಿಲ್ಲ. ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ಎಂದಿಗೂ ನನಸಾಗಲ್ಲ. ರಾಹುಲ್ ಗಾಂಧಿ ಬಾಡಿ ಫಿಟ್ನೆಸ್ ಇದ್ದಾರೆ ಮೆಂಟಲ್ ಫಿಟ್ನೆಸ್ ಇದಾರ? ಎಂದು ಅವರು ಪ್ರಶ್ನಿಸಿದರು.
ರಾಹುಲ್ ಗಾಂಧಿ ದೇಶ ಆಳಲು ಮೆಂಟಲ್ ಫಿಟ್ನೆಸ್ ಇದ್ದಾರಾ? ಅನ್ನೋದನ್ನು ದೇಶದ ಜನ ತೀರ್ಮಾನ ಮಾಡ್ತಾರೆ ಎಂದು ಇದೇ ವೇಳೆ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka