ರಾಗಾ ಅನರ್ಹ: ಮಾಡಿದುಣ್ಣೋ ಮಹರಾಯ ಎಂದ ವಿಜಯೇಂದ್ರ
ಚಾಮರಾಜನಗರ: ಮಾಡಿದೊಣ್ಣೋ ಮಹರಾಯ ಎಂಬಂತೆ ರಾಹುಲ್ ಗಾಂಧಿಗಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ರಾಗಾ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಕ್ಕೆ ಪ್ರತಿಕ್ರಿಯಿಸಿದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಯುವ ಸಮಾವೇಶದ ಬಳಿಕ ಅವರು ಮಾತನಾಡಿ, ಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿರುವಾಗ ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದು ಸರಿಯಲ್ಲ, ನ್ಯಾಯಾಲಯ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಅಭಿಪ್ರಾಯಪಟ್ಟರು.
ಇನ್ನೂ, ಸಿದ್ದರಾಮಯ್ಯ ಅವರ ಕ್ಷೇತ್ರ ಕಗ್ಗಂಟಾಗಿರುವ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ಮುಖಂಡರೇ ಮಾಸ್ಟರ್ ಪ್ಲಾನ್ ಮಾಡಿದ್ದಾರೆ, ಕಾಂಗ್ರೆಸ್ ನ ಒಳಜಗಳದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಭಿವೃದ್ಧಿಪರ್ವಕ್ಕೆ ಜನ ಆಶೀರ್ವಾದ ಮಾಡುತ್ತಾರೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿ ಎಸ್, ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ತಮ್ಮ ಸ್ಪರ್ಧೆ ಬಗ್ಗೆ ಮಾತನಾಡಿ, ನಾನು ಈಗಾಗಲೇ ಶಿಕಾರಿಪುರದಲ್ಲಿ ಎರಡು ಸುತ್ತಿನ ಪ್ರವಾಸ ಶುರು ಮಾಡುತ್ತಿದ್ದೇನೆ, ವರುಣದಲ್ಲಿ ಸ್ಪರ್ಧೆ ಕುರಿತು ಚರ್ಚೆ ನಡೆದಿಲ್ಲ, ಎಲ್ಲರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದ್ದು ಕಾರ್ಯಕರ್ತರಿಗೆ ಬಲ ತುಂಬುವ ಕೆಲಸ ಮಾಡುತ್ತೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw