ಮಂಗಳೂರಿನ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ

rahulgandhi
28/04/2023

ಉಡುಪಿಯಲ್ಲಿ ಕಾಂಗ್ರೆಸ್ ಸಮಾವೇಶ ಮುಗಿಸಿದ ನಂತರ ಮುಸ್ಸಂಜೆ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ನ ಐದನೇ ಗ್ಯಾರಂಟಿ ಘೋಷಣೆ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿ ಮತ್ತೆ ಸುದ್ದಿಯಾದ್ರು.

ಇದೇ ಬೆನ್ನಲ್ಲೇ  ಮಂಗಳೂರಿನ ಪ್ರಸಿದ್ಧ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ನಾಯಕ ಐಸ್ ಕ್ರೀಮ್ ಸವಿದರು. ನಗರದ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ರಾತ್ರಿ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ಮುಖಂಡರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ ತನ್ನಿಷ್ಟದ ಐಸ್ ಕ್ರೀಂ ಸವಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಕೆ.ಸಿ.ವೇಣುಗೋಪಾಲ್, ನಲ್ಪಾಡ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗೆ ಸಾಥ್ ನೀಡಿದ್ರು.

ಇದೇ ಸಂದರ್ಭದಲ್ಲಿ ರಾಹುಲ್ ಅವರೊಂದಿಗೆ ಸೆಲ್ಫಿಗೆ ಜನ ಮುಗಿ ಬಿದ್ದ ಘಟನೆಯೂ ನಡೆಯಿತು. ಜನರ ಕ್ರೇಜ್ ನೋಡಿ ಸೆಲ್ಫಿಗೆ ರಾಹುಲ್ ಕೂಡ ಸಹಕರಿಸಿ ಮಾದರಿಯಾದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version