ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್​..! - Mahanayaka
5:09 PM Saturday 21 - September 2024

ರಾಹುಲ್ ಗಾಂಧಿಗೆ ವಿಧಿಸಿದ್ದ 2 ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದ ಗುಜರಾತ್ ಹೈಕೋರ್ಟ್​..!

07/07/2023

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತ, ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಗುಜರಾತ್ ಹೈಕೋರ್ಟ್​ ಇಂದು ಎತ್ತಿ ಹಿಡಿಯಿತು.
ಈ ಹಿಂದೆ ಮಾರ್ಚ್​ 23ರಂದು ಸೂರತ್ ಕೋರ್ಟ್ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು.
ಇದೀಗ ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರದ ಹಿನ್ನೆಲೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ ಕುರಿತು ತೀರ್ಪು ನೀಡಿದೆ. ಮಾರ್ಚ್ 23 ರಂದು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್​ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.
ಈ ಹಿಂದೆ ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಆದರೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
2019ರ ಏಪ್ರಿಲ್ 13ರಂದು ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ‘ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಲ್ಲಾ ಉಪನಾಮಗಳು ಒಂದೇ ರೀತಿ ಇದೆ, ಎಲ್ಲಾ ಕಳ್ಳರ ಉಪನಾಮ ಮೋದಿ ಯಾಕೆ..?’ ಎಂದು ಹೇಳಿದ್ದರು.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


Provided by

ಇತ್ತೀಚಿನ ಸುದ್ದಿ