ಸೋನಿಯಾ ಗಾಂಧಿ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ: ಫೋಟೋ ವೈರಲ್
ಮಂಡ್ಯ: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟುವ ಅಪರೂಪದ ಕ್ಷಣ ಕ್ಯಾಮರದ ಕಣ್ಣಿನಲ್ಲಿ ಸೆರೆಯಾಗಿದೆ.
ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಕಾಂಗ್ರೆಸ್ ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ. ಜೊತೆಗೆ, ತಾಯಿಯನ್ನು ಗೌರವಿಸುವವರು, ಕಾಳಜಿ ತೋರುವವರು ಮಾತ್ರ ತಾಯ್ನೆಲವನ್ನೂ ಗೌರವಿಸಬಲ್ಲರು ಎಂದು ಬರೆಯಲಾಗಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ವ್ಯಕ್ತವಾಗಿರುವ ಜನ ಬೆಂಬಲ ಕಂಡು ಸೋನಿಯಾ ಗಾಂಧಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೆಲ ಕಾಲ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಕಾರ್ಯಕರ್ತರಿಗೆ ಸ್ಪೂರ್ತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka