ಅದಾನಿ ಭ್ರಷ್ಟಾಚಾರ ಪ್ರಕರಣ: ಸಂಸತ್ ಆವರಣದಲ್ಲಿ ವಿಪಕ್ಷಗಳ ಪ್ರತಿಭಟನೆ - Mahanayaka
8:17 AM Wednesday 5 - February 2025

ಅದಾನಿ ಭ್ರಷ್ಟಾಚಾರ ಪ್ರಕರಣ: ಸಂಸತ್ ಆವರಣದಲ್ಲಿ ವಿಪಕ್ಷಗಳ ಪ್ರತಿಭಟನೆ

06/12/2024

ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ವಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

‘ಮೋದಿ-ಅದಾನಿ ಭಾಯ್ ಭಾಯ್’ ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ ಜೆಪಿಸಿ ರಚಿಸಬೇಕು ಎಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.

 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ, ಸಹೋದರಿ ಪ್ರಿಯಾಂಕಾ ಗಾಂಧಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು.
‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳಾದ ಆರ್‌ಜೆಡಿ, ಜೆಎಂಎಂ ಸಂಸದರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಆದರೆ ಟಿಎಂಸಿ ಹಾಗೂ ಸಮಾಜವಾದಿ ಪಕ್ಷದ ಸದಸ್ಯರು ಪ್ರತಿಭಟನೆಯಿಂದ ದೂರವುಳಿದರು.

ನಂತರ ಪ್ರತಿಕ್ರಿಯಿಸಿದ ಪ್ರಿಯಾಂಕಾ, ‘ಅದಾನಿ ಪ್ರಕರಣದಲ್ಲಿ ಚರ್ಚೆ ನಡೆಸಲು ಪ್ರಧಾನಿ ಮೋದಿ ಹೆದರುತ್ತಾರೆ’ ಎಂದು ಆರೋಪಿಸಿದ್ದಾರೆ.
ಗುರುವಾರ ‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂದು ಬರೆದಿರುವ ಜಾಕೆಟ್ ಧರಿಸಿ ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ