ಸೇನೆ ವಿರುದ್ಧ ಅಪಮಾನಕಾರಿ ಹೇಳಿಕೆ ಆರೋಪ: ರಾಹುಲ್ ಗಾಂಧಿಗೆ ಸಮನ್ಸ್

ಭಾರತ್ ಜೋಡೋ ಯಾತ್ರೆಯ ವೇಳೆ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ.
ಲಕ್ನೋದ ವಿಶೇಷ ಸಂಸದ-ಶಾಸಕ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಸಂಘರ್ಷದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ದೂರು ದಾಖಲಿಸಿದ್ದಾರೆ. ಮಾರ್ಚ್ 24 ರಂದು ರಾಹುಲ್ ಗಾಂಧಿಗೆ ಹಾಜರಾಗುವಂತೆ ಕೋರ್ಟ್ ಹೇಳಿದೆ.
ಡಿಸೆಂಬರ್ 16, 2022 ರಂದು, ಭಾರತೀಯ ಸೇನೆಯ ವಿರುದ್ಧ ಗಾಂಧಿಯವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಇದು ಭಾರತೀಯ ಸೇನೆಯ ವರ್ಚಸ್ಸಿಗೆ ಕಳಂಕ ತಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೈನಿಕರ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದಾರೆ ಎಂಬುದು ರಾಹುಲ್ ಟೀಕೆಯಾಗಿತ್ತು. ಇದರ ವಿರುದ್ಧ ಸೇನೆ ಪ್ರತ್ಯುತ್ತರ ನೀಡಿದೆ.
ಡಿಸೆಂಬರ್ 12, 2022 ರಂದು ಮಾಧ್ಯಮದವರೊಂದಿಗೆ ಈ ವಿಷಯದಲ್ಲಿ ಮಾತನಾಡಿದ್ದರು. ಆ ಬಳಿಕ ಭಾರತೀಯ ಸೇನೆಯು ಅಧಿಕೃತ ವಿವರಣೆಯನ್ನು ಬಿಡುಗಡೆ ಮಾಡಿತು. ‘‘ಚೀನಾ ಪಡೆಗಳು ಅಕ್ರಮವಾಗಿ ಅರುಣಾಚಲ ಪ್ರದೇಶಕ್ಕೆ ಪ್ರವೇಶಿಸಿವೆ, ಆದರೆ ಭಾರತೀಯ ಪಡೆಗಳು ಸೂಕ್ತವಾಗಿ ಪ್ರತಿಕ್ರಿಯಿಸಿದ್ದರಿಂದ ಅವರನ್ನು ಹಿಂಪಡೆಯಲಾಗಿದೆ ಎಂಬುದು ಸೇನೆಯ ವಿವರಣೆ.
ಆದರೆ, ರಾಹುಲ್ ಗಾಂಧಿ ಯ ಹೇಳಿಕೆಯು ಸೇನೆಯನ್ನು ಅವಮಾನಿಸಿದೆ ಮತ್ತು ದೇಶದ ಗಡಿಗಳನ್ನು ರಕ್ಷಿಸುವ ಅವರ ಧೀರ ಪ್ರಯತ್ನಗಳನ್ನು ದುರ್ಬಲಗೊಳಿಸಿದೆ ಎಂದು ದೂರುದಾರ ಶ್ರೀವಾಸ್ತವ ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj