ರಾಹುಲ್ ಗಾಂಧಿ ದೇಶದಲ್ಲಿ ಅಂತರ್ ಯುದ್ಧ ಬಯಸಿದ್ದಾರೆ: ವಕ್ಫ್ ಮಂಡಳಿ ವಿವಾದದ ಮಧ್ಯೆ ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ - Mahanayaka

ರಾಹುಲ್ ಗಾಂಧಿ ದೇಶದಲ್ಲಿ ಅಂತರ್ ಯುದ್ಧ ಬಯಸಿದ್ದಾರೆ: ವಕ್ಫ್ ಮಂಡಳಿ ವಿವಾದದ ಮಧ್ಯೆ ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

04/11/2024

ವಕ್ಫ್ ಮಂಡಳಿ ವಿವಾದದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದಲ್ಲಿ ಅಂತರ್ ಯುದ್ಧವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.
ವಕ್ಫ್ ಮಂಡಳಿಯ ಹೆಸರಿನಲ್ಲಿ ದೇಶದಲ್ಲಿ ಅಂತರ್ ಯುದ್ಧವನ್ನು ಸೃಷ್ಟಿಸಲು ರಾಹುಲ್ ಗಾಂಧಿ ಬಯಸಿದ್ದಾರೆ. ಇದಕ್ಕಾಗಿ ಅವರು ಹೊಸ ಟೂಲ್ ಕಿಟ್ ಗಲಾನ್ನು ತರುತ್ತಿದ್ದಾರೆ. ಕಾಂಗ್ರೆಸ್‌ನ ತಪ್ಪುಗಳು ಮತ್ತು ರಾಹುಲ್ ಗಾಂಧಿ ಅವರ ಈ ಕನಸು ನನಸಾಗುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.


Provided by

ಬಾಂಗ್ಲಾದೇಶದಲ್ಲಿ ಹಿಂದೂಗಳು ಎದುರಿಸುತ್ತಿರುವ ಧಾರ್ಮಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆಯನ್ನು ಅವರು ಇದೇ ವೇಳೆ ಟೀಕಿಸಿದರು.

“ಬಾಂಗ್ಲಾದೇಶದಲ್ಲಿ ಹಿಂದೂಗಳು ಧಾರ್ಮಿಕ ದೌರ್ಜನ್ಯವನ್ನು ಎದುರಿಸಿದಾಗ, ಸಲ್ಮಾನ್ ಖುರ್ಷಿದ್ ಮತ್ತು ಇತರರು ಸೇರಿದಂತೆ ಕಾಂಗ್ರೆಸ್ ನಾಯಕರು ಬಾಂಗ್ಲಾದೇಶದಂತಹ ದೃಶ್ಯಗಳನ್ನು ಭಾರತದಲ್ಲಿ ಮರುಸೃಷ್ಟಿಸಲಾಗುವುದು ಎಂದು ಹೇಳಿದರು” ಎಂದು ಸಿಂಗ್ ಆರೋಪಿಸಿದ್ದಾರೆ.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ