ಪ್ರೀತಿಗೆ ಪೋಷಕರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ
ಬೆಂಗಳೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಆನೇಕಲ್ನ ಸಂಮದೂರು ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮಣಿ ಹಾಗೂ ಆತನ ಪ್ರೇಯಸಿ ಅನುಷಾ ಮೃತ ಪ್ರೇಮಿಗಳು. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಕೆಲವು ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಕುಟುಂಬಗಳಿಗೆ ತಿಳಿದಿದ್ದು, ಇವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಮನನೊಂದ ಪ್ರೇಮಿಗಳು ನಿನ್ನೆ ಆನೇಕಲ್ನ ಸಂಮದೂರು ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಸಂಬಂಧ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ: ವಿದೇಶಿ ಪ್ರಜೆ ಸೆರೆ
ಫುಡ್ ಡೆಲಿವರಿ ಬಾಯ್ ಅಪಹರಣ: 6 ಮಂದಿ ಆರೋಪಿಗಳ ಬಂಧನ
ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ