ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ ಓಡಾಡಿದ ಶಾಸಕ | ವಿಡಿಯೋ ವೈರಲ್ - Mahanayaka
5:22 AM Thursday 19 - September 2024

ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ ಓಡಾಡಿದ ಶಾಸಕ | ವಿಡಿಯೋ ವೈರಲ್

gopal mandal
03/09/2021

ಬಿಹಾರ: ಬಿಹಾರದ ಜೆಡಿಯು ಶಾಸಕರೊಬ್ಬರು ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ  ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದೆಹಲಿಯ ತೇಜಸ್ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟ್ ನಲ್ಲಿ ಶಾಸಕರು ಸಹ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಹಾರದ ಜೆಡಿಯು ಶಾಸಕ ಗೋಪಾಲ್ ಮಂಡಲ್ ಒಳ ಉಡುಪಿನಲ್ಲಿ ಓಡಾಡಿದ ಶಾಸಕರಾಗಿದ್ದು, ಪಾಟ್ನಾದಿಂದ ನವದೆಹಲಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಶಾಸಕರು ಬಿಳಿ ಬಣ್ಣದ ಬನಿಯನ್ ಹಾಗೂ ಅಂಡರ್ ವೇರ್ ಧರಿಸಿ ಓಡಾಡುತ್ತಿರುವುದು ವೈರಲ್ ವಿಡಿಯೋದಲ್ಲಿ ಪತ್ತೆಯಾಗಿದೆ.

ಶಾಸಕರು ಮಹಿಳೆಯರು ಮಕ್ಕಳೆದುರು ಒಂದು ಬನಿಯನ್ ಹಾಗೂ ನಿಕ್ಕರ್ ಹಾಕಿಕೊಂಡು ಓಡಾಡುತ್ತಿರುವುದಕ್ಕೆ ಸಾರ್ವಜನಿಕರು ಪ್ರಶ್ನಿಸಿ, ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ, ನಾನೊಬ್ಬ ಶಾಸಕ ಎಂದು ಸಾರ್ವಜನಿಕರ ಬಳಿಯೇ ತಗಾದೆ ಎತ್ತಿದ್ದಾರೆ. ಆದರೆ ಸಾರ್ವಜನಿಕರು ಕೂಡ ಶಾಸಕರನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದು, ಕೊನೆಗೆ  ರೈಲಿನ ಟಿಕೆಟ್ ಕಲೆಕ್ಟರ್ ಗೆ ದೂರು ನೀಡಿದ್ದಾರೆ. ಈ ವೇಳೆ ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಿದ್ದಾರೆ.


Provided by

ಇನ್ನೂ ವಿಡಿಯೋ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಮಂಡಲ್, ನನಗೆ ಹೊಟ್ಟೆ ಕೆಟ್ಟಿತ್ತು. ಹಾಗಾಗಿ ಟಾಯ್ಲೆಟ್ ಗೆ ಹೋಗಿದ್ದೆ, ಹೋಗುವ ತರಾತುರಿಯಲ್ಲಿ ಟವೆಲ್ ಸುತ್ತಿಕೊಳ್ಳಲು ಮರೆತು ಹೋಗಿದ್ದೆ ಎಂದು ಸಮರ್ಥಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

“ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ” | ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದ ಸಚಿವ ಈಶ್ವರಪ್ಪ!

ಜಿಂಕೆಯನ್ನು ಬೇಟೆಯಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳಿಂದ ಗುಂಡಿನ ದಾಳಿ!

“ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?”: ಕ್ಯಾಂಪಸ್ ಫ್ರಂಟ್ ಭಿತ್ತಿಪತ್ರ ಪ್ರದರ್ಶನ

ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿ ಶೋರೂಂ ಉದ್ಘಾಟಿಸಿದ ಸಚಿವ! | ಜಗತ್ತಿನಲ್ಲೇ ಇದು ಮೊದಲು!

ತ್ರಿಸ್ಟಾರ್ ಹೊಟೇಲ್ ನಲ್ಲಿ 8 ತಿಂಗಳು ತಂಗಿದ | 25 ಲಕ್ಷ ರೂ. ಬಿಲ್ ಆದ ಬಳಿಕ ಆತ ಮಾಡಿದ್ದೇನು ಗೊತ್ತಾ?

ಗಂಡ, ಹೆಂಡತಿ ನಡುವೆ ರಾಜಿ ಪಂಚಾಯಿತಿ ವೇಳೆ ಮನ ಬಂದಂತೆ ಗುಂಡು ಹಾರಿಸಿದ ನಿವೃತ್ತ ಸೈನಿಕ | ಇಬ್ಬರು ಸಾವು

ಭಾರತದ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು | ಓವೈಸಿ ಕಿಡಿ

ಇತ್ತೀಚಿನ ಸುದ್ದಿ