ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗ: 29,200 ರೂ. ಸಂಬಳ
Railway Department Jobs 2024 — ಇಲಾಖೆಯು ಪ್ರತಿ ವರ್ಷವೂ ನಿರೀಕ್ಷೆಗಿಂತ ಹೆಚ್ಚಿನ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಈಗಾಗಲೇ ರೈಲ್ವೆ ಇಲಾಖೆಯಲ್ಲಿ 46,000 ಕ್ಕಿಂತ ಹೆಚ್ಚು ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಳೆದ ಮಾರ್ಚ್ ತಿಂಗಳಿನಲ್ಲಿ ತಂತ್ರಜ್ಞರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು.
ಕಳೆದ ಮಾರ್ಚ್ ತಿಂಗಳಲ್ಲಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆ 9,144 ರಷ್ಟ್ರಿದ್ದವು. ಆದರೆ ಈಗ ಈ ಹುದ್ದೆಗಳ ಸಂಖ್ಯೆಯನ್ನು 14,298 ಹುದ್ದೆಗಳಿಗೆ ಏರಿಸಿ, ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟಿದೆ. ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ 18 ವಿಭಾಗಗಳ ಹುದ್ದೆಗಳ ಜೊತೆಗೆ ಇತರೆ 22 ವಿಭಾಗಗಳ ತಂತ್ರಜ್ಞಾನ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬಹುದಾಗಿ ತಿಳಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅರ್ಜಿ ಸಲ್ಲಿಕೆ ಲಿಂಕನ್ನು ಶೀಘ್ರವೇ ಸಕ್ರಿಯಗೊಳಿಸುವುದಾಗಿ ರೈಲ್ವೆ ನೇಮಕಾತಿ ಮಂಡಳಿಯು ಪ್ರಕಟಿಸಿದೆ.
ನಮ್ಮ ಬೆಂಗಳೂರು ವಲಯದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಲ್ಲಿ ಒಟ್ಟು 381 ಹುದ್ದೆಗಳನ್ನು ಬೆಂಗಳೂರು ವಲಯಕ್ಕೆ ಮಿಸಲಿಟ್ಟಿದ್ದು ಕನ್ನಡಿಗರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ವಯೋಮಿತಿ ಹಾಗೂ ಅರ್ಹತೆಗಳು:
Railway Recruitment Board : ಹೊರಡಿಸಿರುವ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಗ್ರೇಡ್ 1 ಹಾಗೂ ಗ್ರೇಡ್ 3 ಟೆಕ್ನಿಷಿಯನ್ ಹುದ್ದೆಗಳನ್ನು ನಿಮ್ಮ ಕಥೆ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 36 ವರ್ಷದ ವಯೋಮಿತಿಯಲ್ಲಿರಬೇಕು. ಶೈಕ್ಷಣಿಕ ಅರ್ಹತೆಗಳನ್ನು ನೋಡುವುದಾದರೆ, ಗ್ರೇಡ್ -1 ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಎಸ್ಸಿ, ಡಿಪ್ಲೋಮಾ ಎಂಜಿನಿಯರಿಂಗ್ ಅಥವಾ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಗ್ರೇಡ್ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿ ಆಯಾ ಟ್ರೇಡ್ ಗಳಲ್ಲಿ ಐಟಿಐ ಮುಗಿಸಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ:
ಗ್ರೇಡ್ 1 ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 29,200ರೂ. ಇರಲಿದೆ.
* ಗ್ರೇಡ್ 3 ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 19,900ರೂ. ಇರಲಿದೆ.
ಅರ್ಜಿ ಶುಲ್ಕ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳು 500 ರೂಪಾಯಿ
* ಉಳಿದ ವರ್ಗದ ಅಭ್ಯರ್ಥಿಗಳು 250 ರೂಪಾಯಿ ಅರ್ಜಿ ಸ್ವಲ್ಪ ಪಾವತಿಸಬೇಕು.
ನೇಮಕಾತಿ ಪ್ರಮುಖ ಲಿಂಕ್ : https://www.rrbnc.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: