ರೈಲ್ವೆ ಇಲಾಖೆಯಲ್ಲಿ 3,445 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ : Railway NTPC Recruitment 2024
ರೈಲ್ವೆ ನೇಮಕಾತಿ ಮಂಡಳಿಯು, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ತಾಂತ್ರಿಕೇತರ ವಿಭಾಗದ ಹುದ್ದೆಗಳನ್ನು ಎರಡನೇ ಹಂತದಲ್ಲಿ ಒಟ್ಟು 3,445 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿವಿಧ ಹಲವು ಹುದ್ದೆಗಳು ಈ ನೇಮಕಾತಿಯಲ್ಲಿ ಖಾಲಿ ಇದ್ದು, ರೈಲ್ವೆ ನೇಮಕಾತಿ ಮಂಡಳಿಯು ನೇಮಕಾತಿಗೆ ನಿಗದಿಪಡಿಸಿದ ಅರ್ಹತೆಗಳ ವಿವರವು ಹಾಗೂ ವಿವಿಧ ನೇಮಕಾತಿಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಗತ್ಯ ಪ್ರಮುಖ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ :
ರೈಲ್ವೆ ನೇಮಕಾತಿ ಮಂಡಳಿಯ 2ನೇ ಹಂತದ ತಾಂತ್ರಿಕೇತರ ಹುದ್ದೆಗಳಲ್ಲಿ, ಜೂನಿಯರ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್, ಟ್ರೈನ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಬ್ಲಾಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಸಿರುವ ಅರ್ಹತೆಯು ಕೆಳಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಮಂಡಳಿಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳೇನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಗೆ ಒಳಪಡುತ್ತಿದ್ದರೆ, ನಿಮಗೆ ಗರಿಷ್ಠ ವಯೋಮಿತಿಯಲ್ಲಿ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು?
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಅಲ್ಪಸಂಖ್ಯಾತ ವರ್ಗದವರು, ಆರ್ಥಿಕ ದುರ್ಬಲ ವರ್ಗದವರು ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ 250 ರೂ. ಇವರನ್ನು ಹೊರತುಪಡಿಸಿ ಉಳಿದ ಎಲ್ಲಾ ವರ್ಗದವರು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.
ನೇಮಕಾತಿಯ ಪ್ರಮುಖ ದಿನಾಂಕಗಳು :
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2024 ಆಗಿರುತ್ತದೆ. ಅದೇ ರೀತಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಅಕ್ಟೋಬರ್ 21, 2024. ಅರ್ಹರಿರುವ ಅಭ್ಯರ್ಥಿಗಳು ಈ ನಿಗದಿತ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿರಿ.
ಅರ್ಜಿ ಸಲ್ಲಿಕೆಯ ಲಿಂಕ್ : www.rrbbnc.gov.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: