ಮಳೆ ಮುನ್ಸೂಚನೆ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಬೆಂಗಳೂರು: ಇಂದು ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ.
ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಬೀದರ್ ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗುರುಮಿಟ್ಕಲ್, ಕೋಲಾಪುರ, ಶಿರಹಟ್ಟಿ, ಸುಳ್ಯ, ಮುಂಡಗೋಡು, ಚಿಟಗುಪ್ಪ, ಬನವಾಸಿ, ಮಾನ್ವಿ, ಧಾರವಾಡ, ಲಕ್ಷ್ಮೇಶ್ವರ, ಹೊಸಕೋಟೆ, ಕಳಸ, ಕಿರವತ್ತಿ, ಯಲ್ಲಾಪುರ, ಯಲಬುರ್ಗ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಬಿಳಿಗಿ, ಚಿಂಚೋಳಿ, ಕುರ್ಡಿ, ಬಸವನ ಬಾಗೇವಾಡಿ, ಇಳಕಲ್, ಹಿರಿಯೂರು, ಪರಶುರಾಂಪುರ, ಮಾಗಡಿ, ಹಾರಂಗಿ, ಗುಬ್ಬಿ, ಬಾಳೆಹೊನ್ನೂರು, ಶೃಂಗೇರಿಯಲ್ಲಿ ಮಳೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: