ಮಳೆಯ ಮುನ್ಸೂಚನೆ: ಹೀಗಿದೆ ಹವಾಮಾನ ಇಲಾಖೆ ವರದಿ - Mahanayaka

ಮಳೆಯ ಮುನ್ಸೂಚನೆ: ಹೀಗಿದೆ ಹವಾಮಾನ ಇಲಾಖೆ ವರದಿ

rain
31/07/2024

ಬೆಂಗಳೂರು: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು ಭಾಗಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ.


Provided by

ಕೊಡಗು ಹಾಗೂ ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಶೃಂಗೇರಿ, ಕುದುರೆಮುಖ, ಮೂಡಿಗೆರೆ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿಯೂ ಮಳೆ ಸ್ವಲ್ಪ ಜಾಸ್ತಿ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ದಾವಣಗೆರೆ, ಹಾವೇರಿ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಇವತ್ತಿನಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.


Provided by

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ನಿನ್ನೆಯ ಮಳೆಯ ಅನಿರೀಕ್ಷಿತವಾಗಿತ್ತು. ಆಗಾಧ ಪ್ರಮಾಣದ ಮೋಡ ಹಾಗೂ ಅತಿ ಭಾರಿ ಮಳೆಗೆ ಬೇರೆಯದೇ ವೈಜ್ಞಾನಿಕ ಕಾರಣಗಳಿರಬಹುದು. ಸಾಮಾನ್ಯ ಮುಂಗಾರು ಆಗಿರಲಾರದು.

ಈಗಿನಂತೆ ಆಗಸ್ಟ್ 2ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆಗಷ್ಟ್ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಹಿತ ಇರಬಹುದು).
ಮುಂಗಾರು ದುರ್ಬಲಗೊಳ್ಳತ್ತಿದೆಯೇ? ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರ ಗಮನಿಸುವಾಗ ಈ ಪ್ರಶ್ನೆ ಉದ್ಭವಿಸುತ್ತಿದೆ. ಮಾರುತಗಳು ಮಂದವಾಗಿ ದುರ್ಬಲಗೊಂಡತೆ ಗೋಚರಿಸುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ