ಮೇ 6ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ: ಹವಾಮಾನ ವರದಿ ಹೀಗಿದೆ ನೋಡಿ…
ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಮಲ್ಲೇಶ್ವರಂ, ವಿಜಯನಗರ, ಪ್ರಕಾಶನಗರ, ರಾಜಾಜಿನಗರ, ರಿಚ್ಮಂಡ್ ರಸ್ತೆ, ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್ ಸೇರಿದಂತೆ ನಗರದ ಹಲವೆಡೆ ಸೋಮವಾರ, ಮಂಗಳವಾರ ಹಾಗೂ ಬುಧವಾರ ಜೋರು ಮಳೆಯಾಗಿದೆ. ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು.
“ವರ್ಷದ ಮೊದಲ ಚಂಡಮಾರುತ ಮೋಚಾ ಈ ವಾರ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿದೆ. ಇದು ನಗರದ ವಾತಾವರಣದ ಮೇಲೂ ಪರಿಣಾಮ ಬೀರಲಿದೆ. ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ” ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
“ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗಲಿನಲ್ಲಿ ಹಗುರ ಅಥವಾ ಸಾಧಾರಣ ಮಳೆಯಾದರೆ, ರಾಜ್ಯದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯಿದೆ” ಎಂದು ಹೇಳಿದ್ದಾರೆ.
“ಮುಂದಿನ ದಿನಗಳಲ್ಲಿ ಕ್ಲುಮಿನೋನಿಂಬಸ್ ಮೋಡಗಳು ಕೂಡ ರಚನೆಯಾಗಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನವು 32-33 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರುವ ನಿರೀಕ್ಷೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರವೂ ಮಳೆಯಾಗಲಿದೆ. ಈ ಎರಡು ದಿನವೂ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ರೋಡ್ ಶೋ ನಡೆಸಲಿದ್ದರು. ಹೀಗಾಗಿ ರೋಡ್ ಶೋ ಮೇಲೆ ಅನಿಶ್ಚಿತತೆ ಉಂಟಾಗಿದೆ.
ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹಗಲಿನಲ್ಲಿ ಹಗುರದಿಂದ ಸಾಧಾರಣ ಮಳೆಯಿದ್ದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw