ಹೆಣ್ಣು ಮಕ್ಕಳನ್ನು ಜವಾಬ್ದಾರಿಯಿಂದ ಪಾಲನೆ, ಪೋಷಣೆ ಮಾಡಿ | ಕಾಂಗ್ರೆಸ್ ನಾಯಕಿ ಕುಸುಮಾ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ನಾಲ್ವಡಿ ಕೃಷ್ಣರಾಜ ಒಡೆಯರು ವಾರ್ಡಿನಲ್ಲಿ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಹಲವು ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಕುಸುಮಾ, ಮಹಿಳಾ ದಿನಾಚರಣೆಯು ಪ್ರತಿನಿತ್ಯ ಆಗಬೇಕು. ಕೇವಲ ಒಂದು ದಿವಸಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣು ತಾಯಿಯಾಗಿ ಮಗಳಾಗಿ ಹೆಂಡತಿಯಾಗಿ ಸಂಸಾರದ ನೊಗವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ. ಹೆಣ್ಣು ಮಕ್ಕಳನ್ನು ಜವಾಬ್ದಾರಿಯಿಂದ ಪಾಲನೆ,ಪೋಷಣೆ ಮಾಡಿ ಉತ್ತಮ ಶಿಕ್ಷಣವನ್ನ ಕೊಡಿಸಬೇಕಾದದ್ದು ಎಲ್ಲರ ಕರ್ತವ್ಯ ಎಂದರು.
ಮಹಿಳೆ ಇಂದು ಪ್ರಪಂಚದಾದ್ಯಂತ ತನ್ನದೇ ಆದ ಸಾಮರ್ಥ್ಯವನ್ನು ಹೊಂದಿ ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾಳೆ. ಪ್ರಪಂಚದ ಹಲವಾರು ದೇಶಗಳಲ್ಲಿ ಮಹಿಳೆಯರು ಉನ್ನತ ಸ್ಥಾನವನ್ನು ಹೊಂದಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಹೆಣ್ಣು ಮಕ್ಕಳ ಬ್ರೂಣ ಹತ್ಯೆ ನಿಲ್ಲಬೇಕು ಅಂದರು.
ಇದೇ ಸಂದರ್ಭದಲ್ಲಿ ಡಾ.ಎಚ್.ತುಕಾರಾಂ, ಸುವರ್ಣ ತುಕಾರಾಂ ಮಹಿಳಾ ಅಧ್ಯಕ್ಷರಾದ ಲಲಿತಾ ರುದ್ರಸ್ವಾಮಿ ಚಂದ್ರಿಕಾ, ಪದ್ಮ ಕಲ್ಯಾಣಿ ಸುಮಾ, ರೇಣುಕಾ, ಹಂಸ, ಪುಟ್ಟಮ್ಮ, ಸುಮಿತ್ರ ,ಪ್ರಮೀಳಾ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw