ರೈತರಿಗೆ ಭರ್ಜರಿ ಕೊಡುಗೆ ನೀಡಿದ ಈ ಸರ್ಕಾರ | 16.43 ಲಕ್ಷ ರೈತರ ಸಾಲ ಮನ್ನಾ - Mahanayaka
11:20 PM Sunday 15 - December 2024

ರೈತರಿಗೆ ಭರ್ಜರಿ ಕೊಡುಗೆ ನೀಡಿದ ಈ ಸರ್ಕಾರ | 16.43 ಲಕ್ಷ ರೈತರ ಸಾಲ ಮನ್ನಾ

05/02/2021

ಚೆನ್ನೈ: ತಮಿಳುನಾಡು ಸರ್ಕಾರವು ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು,  16.43 ಲಕ್ಷ ರೈತರ ಸುಮಾರು 12,110 ಕೋಟಿ ರೂ. ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಈ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ. ತತ್ ಕ್ಷಣದಿಂದಲೇ ಸಾಲ ಮನ್ನಾ ಯೋಜನೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಈ ವಿಚಾರವನ್ನು ಪಳನಿಸ್ವಾಮಿ ಹೇಳಿದ್ದಾರೆ. ಸತತ 2 ಬಾರಿ ಅಪ್ಪಳಿಸಿ ಚಂಡಮಾರುತ, ಅಕಾಲಿಕ ಮಳೆ, ಬೆಳೆ ಹಾನಿ ಮತ್ತು ಲಾಕ್ ಡೌನ್ ಸಂಕಷ್ಟದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅನ್ನದಾತರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ