ಮಹಾರಾಷ್ಟ್ರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿರುವ ರಾಜ್ ಠಾಕ್ರೆ: 225-250 ಸ್ಥಾನಗಳ ಮೇಲೆ ಕಣ್ಣು
ಲೋಕಸಭಾ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟದ ಸೋಲಿನ ನಂತರ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಮುಂಬೈನಲ್ಲಿಂದು ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಜ್ ಠಾಕ್ರೆ, ಪಕ್ಷವು 225-250 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ಕೆಲವೇ ತಿಂಗಳುಗಳ ಹಿಂದೆ ಠಾಕ್ರೆ ಅವರು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ ಡಿಎಗೆ ಬೇಷರತ್ತಾದ ಬೆಂಬಲವನ್ನು ನೀಡಿದ್ದರು. “ರಾಜ್ಯದ ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ ಸುಮಾರು 225 ರಿಂದ 250 ಸ್ಥಾನಗಳಿಗೆ ನಾವು ತಯಾರಿ ನಡೆಸುತ್ತಿದ್ದೇವೆ” ಎಂದು ಠಾಕ್ರೆ ತಮ್ಮ ಭಾಷಣದಲ್ಲಿ ಹೇಳಿದ್ದರು.
ರಾಜ್ ಠಾಕ್ರೆ ತಮ್ಮ ಪಕ್ಷದಿಂದ ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು ಪ್ರತಿ ಕ್ಷೇತ್ರದಲ್ಲಿ ಐವರು ನಾಯಕರ ತಂಡವನ್ನು ನೇಮಿಸಿದ್ದಾರೆ. ಹೆಚ್ಚುವರಿಯಾಗಿ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ಮತ್ತು ಪಕ್ಷದ ಕಾರ್ಯಕರ್ತರಿಂದ ಪ್ರತಿಕ್ರಿಯೆ ಸಂಗ್ರಹಿಸಲು ಅವರು ಆಗಸ್ಟ್ 1 ರಂದು ತಮ್ಮ ಮಹಾರಾಷ್ಟ್ರ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth