ರಾಜಭವನಕ್ಕೆ ಮುತ್ತಿಗೆ; ಪೊಲೀಸರು ತಡೆದರೆ ಹೆದ್ದಾರಿ ತಡೆದು ಪ್ರತಿಭಟಿಸಿ | ರೈತ ಹೋರಾಟಗಾರರಿಗೆ ಡಿ.ಕೆ.ಶಿವಕುಮಾರ್ ಕರೆ

20/01/2021

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ, ರೈತರ ಜೊತೆಗೆ ಕಾಂಗ್ರೆಸ್ ಬೀದಿಗಿಳಿದಿದ್ದು, ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ನಿಮ್ಮನ್ನು ತಡೆದರೆ ಅಲ್ಲಿಯೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ಹೆದ್ದಾರಿಯಲ್ಲೇ ತಡೆಯುತ್ತಿರುವುದು ಖಂಡನೀಯ ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ನಮ್ಮ ಹೋರಾಟದ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ತಡೆದ ಕಡೆಯೇ ರಸ್ತೆಯಲ್ಲಿ ಪ್ರತಿಭಟನೆ ಮಾಡಿ, ರಸ್ತೆ ಬಂದ್ ಮಾಡಿ ಎಂದು ಕಾರ್ಯಕರ್ತರು ಹಾಗೂ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಸರ್ಕಾರವು ಹೆಚ್ಚು ಜನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಾರದು ಎಂದು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎನ್ನುವುದು ನಮಗೆ ಗೊತ್ತಿದೆ. ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಜನರು ಫ್ರೀಡಂ ಪಾರ್ಕ್ ಗೆ ಬನ್ನಿ. ಆ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕುವ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version