ರಾಜಕೀಯ ಅಸ್ಥಿರತೆ; ಶ್ರೀಲಂಕಾ ಪ್ರಧಾನಿ ರಾಜೀನಾಮೆ
ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದ್ದು ಈ ನಡುವೆ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಇಂದು ರಾಜೀನಾಮೆ ನೀಡಿದ್ದಾರೆ.
ಪ್ರಧಾನಿಯವರು ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋತಬಾಯ ರಾಜಪಕ್ಸೆ ಅವರಿಗೆ ಸಲ್ಲಿಸಿದ್ದಾರೆ.ಶ್ರೀಲಂಕಾದಲ್ಲಿನ ರಾಜಕೀಯ ಅಸ್ಥಿರತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಧಾನಿಯವರು ರಾಷ್ಟ್ರಪತಿಗಳನ್ನು ಭೇಟಿಯಾಗುತ್ತಿದ್ದಾರೆ.
ಮಹಿಂದಾ ರಾಜಪಕ್ಸೆ ಅವರೊಂದಿಗೆ ಸಚಿವರು ಕೂಡ ರಾಜೀನಾಮೆ ನೀಡುವ ಸೂಚನೆಗಳಿವೆ. ರಾಷ್ಟ್ರಪತಿ ರಾಜೀನಾಮೆಯನ್ನು ಅಂಗೀಕರಿಸಿರುವ ಬಗ್ಗೆ ಅಧಿಕೃತ ಮಾಹಿತಿ ದೊರೆತಿಲ್ಲ .ದೇಶದಲ್ಲಿ ಕರ್ಫ್ಯೂ ಘೋಷಣೆಯ ಹೊರತಾಗಿಯೂ, ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳ ನಡುವೆ ಈಗ ರಾಜೀನಾಮೆ ನೀಡಲಾಗಿದೆ.
ಶ್ರೀಲಂಕಾದಲ್ಲಿ ಕರ್ಫ್ಯೂ ನಾಳೆ ಬೆಳಗಿನ ತನಕ ಮುಂದುವರಿಯುತ್ತದೆ ಆದರೆ ಪ್ರತಿಭಟನೆಯನ್ನು ತಡೆಯಲು ಸರ್ಕಾರವು ದೇಶಾದ್ಯಂತ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿದೆ. ಫೇಸ್ಬುಕ್, ಟ್ವಿಟರ್, ವಾಟ್ಸಾಪ್, ಯೂಟ್ಯೂಬ್, ಸ್ನ್ಯಾಪ್ ಚಾಟ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ 12 ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಲಾಗಿದೆ.
ಕೊಲಂಬೊದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೋಲಿಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಯೆರಿಕೆ
ರಂಝಾನ್ ಉಪವಾಸದ ಸಂದರ್ಭದಲ್ಲಿ ಮುಸಲ್ಮಾನರು ಖರ್ಜೂರ ಸೇವಿಸುವುದು ಯಾಕೆ ಗೊತ್ತಾ?
ಕೈಗಳನ್ನು ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯರ ಬೆತ್ತಲೆ ಮೃತದೇಹ ಪತ್ತೆ: ರಷ್ಯಾ ಸೈನಿಕರ ಕ್ರೂರತೆ ಎಂದ ಉಕ್ರೇನ್
ರಷ್ಯಾದ ಗುಂಡಿನ ದಾಳಿಯಲ್ಲಿ ಉಕ್ರೇನಿಯನ್ ಫೋಟೋ ಜರ್ನಲಿಸ್ಟ್ ಸಾವು
ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ