ಮಾವಿನ ಕಾಯಿ ಕಿತ್ತಿದ್ದಕ್ಕೆ ವ್ಯಕ್ತಿಯನ್ನು ಥಳಿಸಿ ಕೊಂದ ಪಾಪಿಗಳು!
ಕೋಟ: ಮಾವಿನ ಕಾಯಿ ಕಿತ್ತ ಆರೋಪ ಹೊರಿಸಿ ವ್ಯಕ್ತಿಯೊಬ್ಬರನ್ನು ಥಳಿಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಜಸ್ಥಾನದ ಕೋಟ ಜಿಲ್ಲೆಯ ಸಂಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೂರಜ್ ಕರಣ್ ಮೀನಾ(36) ಮೃತ ವ್ಯಕ್ತಿಯಾಗಿದ್ದು, ಇವರು ನಂದಲಾಲ್ ಬೈರ್ವಾ ಎಂಬುವವರ ಒಡೆತನದ ಹೊಲವೊಂದರಲ್ಲಿ ಮಾವಿನ ಕಾಯಿ ಕೀಳುತ್ತಿದ್ದ ವೇಳೆ ಎರಡು ಮೋಟಾರ್ ಬೈಕ್ ಗಳಲ್ಲಿ ಬಂದ ಸುಮಾರು 5–6 ಮಂದಿ ಸೂರಜ್ ರನ್ನು ಕರೆದೊಯ್ದು ತೀವ್ರವಾಗಿ ಥಳಿಸಿದ್ದಾರೆ.
ಹಲ್ಲೆಯ ಪರಿಣಾಮವಾಗಿ ಸೂರಜ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಗ್ರಾಮದ ಸರಪಂಚ್ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು, ಸೂರಜ್ ಕರಣ್ ಮೀನಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ,
ಘಟನೆಗೆ ಸಂಬಂಧಿಸಿದಂತೆ ರೋಲನಾ ಗ್ರಾಮದ ನಾಲ್ಕೈದು ಮಂದಿ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಸೂರಜ್ ಸಾವಿನ ನಿಖರ ಕಾರಣ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw