ಫೋನ್ ಕದ್ದಾಲಿಕೆ ವಿವಾದ: ರಾಜಸ್ಥಾನದ ಉನ್ನತ ಪೊಲೀಸ್ ಅಧಿಕಾರಿಯನ್ನು ಭೇಟಿಯಾದ ಸಚಿವ!

ರಾಜಸ್ಥಾನದ ಕ್ಯಾಬಿನೆಟ್ ಸಚಿವ ಕಿರೋಡಿ ಲಾಲ್ ಮೀನಾ ಅವರು ಜೈಪುರದಲ್ಲಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಯು.ಆರ್.ಸಾಹೂ ಅವರನ್ನು ಭೇಟಿ ಮಾಡಿದರು. ಇನ್ನು ಈ ಸಭೆಯ ಬಗ್ಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು, ಸಚಿವರು ಉನ್ನತ ಪೊಲೀಸ್ ಅಧಿಕಾರಿಯನ್ನು ಕರೆಸುವ ಬದಲು ಏಕೆ ಭೇಟಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ ಮಾತನಾಡಿ, “ಕ್ಯಾಬಿನೆಟ್ ಸಚಿವರಾಗಿರುವ ವ್ಯಕ್ತಿಯೊಬ್ಬರು ತಮ್ಮ ಬೇಡಿಕೆಗಳೊಂದಿಗೆ ಡಿಜಿಪಿಯನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು. ಅವರು ಡಿಜಿಪಿಯನ್ನು ಕರೆಸಬಹುದಿತ್ತು” ಎಂದಿದ್ದಾರೆ.
ಇನ್ನು ಈ ಸಭೆಯಲ್ಲಿ ಮೀನಾ ಹಲವಾರು ಸಮಸ್ಯೆಗಳನ್ನು ಎತ್ತಿದರು. ಪೊಲೀಸ್ ಸಿಬ್ಬಂದಿ ಈ ವರ್ಷ ಹೋಳಿ ಆಚರಿಸಲಿಲ್ಲ ಎಂದು ಅವರು ಹೇಳಿದ್ದಾರೆ ಮತ್ತು ಅವರು ದೀಪಾವಳಿಯನ್ನು ಆಚರಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಡಿಜಿಪಿಯನ್ನು ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj